ಬಂಟ್ವಾಳ

ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯೀ ದೇವಸ್ಥಾನ: ಪುನರ್ ಪ್ರತಿಷ್ಠೆ ಬ್ರಹ್ಮ ಕಲಶೋತ್ಸವ – ವಿವರ ಇಲ್ಲಿದೆ

ಬಂಟ್ವಾಳ: ಬಂಟ್ವಾಳ ತಾಲೂಕು ಕುಕ್ಕಿಪಾಡಿ ಗ್ರಾಮದ ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯೀ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಗಳು ಎಪ್ರಿಲ್ 26 ರಿಂದ ಮೇ 02 ರ ತನಕ ಜರುಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಗೌಡ ಮಂಚಕಲ್ಲು ತಿಳಿಸಿದ್ದಾರೆ .

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳ ವಿವರ ನೀಡಿದರು .

26ರಂದು 3 ಗಂಟೆಗೆ ಸಿದ್ದಕಟ್ಟೆ ನಲ್ಲೂರಂಗಡಿ ಬಸದಿಯಿಂದ ಹಸಿರು ಹೊರೆಕಾಣಿಕೆ ನಡೆಯಲಿದೆ. ಸುಬ್ರಹ್ಮಣ್ಯದ  ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಾದ ದೊಂದಿಗೆ ಗಣ್ಯರ ಉಪಸ್ಥಿತಿಯಲ್ಲಿ ಸಂಗಬೆಟ್ಟು ವೀರಭದ್ರ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಭಾಕರ ಐಗಳ್ ಮತ್ತು ಸಿದ್ದಕಟ್ಟೆಯ ವೈದ್ಯರಾದ ಡಾI ಪ್ರಭಾಚಂದ್ರ ಜೈನ್ ಚಾಲನೆ ನೀಡುವರು.

ಜಾಹೀರಾತು

ಸಂಜೆ ಗಂಟೆ 6 ಕ್ಕೆ ಸರಿಯಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ . ದಿನಾಂಕ 27 ಮತ್ತು 28 ರಂದು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

VNR GOLD

29ರಂದು ಬೆಳಿಗ್ಗೆ ಗಂಟೆ 10.27 ಕ್ಕೆ ಮಿಥುನ ಲಗ್ನದಲ್ಲಿ ಪಂಚಲೋಹದ ಶ್ರೀ ದೇವಿಯ ಬಿಂಬ ಪ್ರತಿಷ್ಠೆ, ಮಧ್ಯಾಹ್ನ 3 ಗಂಟೆಗೆ ಪೇಜಾವರ ಶ್ರೀಗಳ ಆಶೀರ್ವಚನ ಇರಲಿದೆ. 30ರಂದು ಸಂಜೆ 4.30ರಿಂದ ತತ್ವಮಸಿ ಶ್ರೀ ಅಯ್ಯಪ್ಪ ಭಜಕ ವೃಂದ ಪೊಳಲಿ ಇವರ ನೇತೃತ್ವದ ವಿವಿಧ ಭಜನಾ ಮಂಡಳಿಗಳಿಂದ “ಭಜನಾ ಸಂಗಮೋತ್ಸವ“ ವನ್ನು ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಬೆಳಾಲು ಇಲ್ಲಿನ ಧರ್ಮದರ್ಶಿ ಹರೀಶ್ ಅರಿಕೋಡಿ ಚಾಲನೆ ನೀಡಲಿದ್ದಾರೆ .ಮೇ 1ರಂದು ಮಿಥುನ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮ ಕಲಶಾಭಿಷೇಕ ನಡೆಯುವುದು. 2ರಂದು ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಲಿದೆ. ಬಳಿಕ ಧಾರ್ಮಿಕ ಸಭೆ ನಡೆಯುವುದು

ಪತ್ರಿಕಾಗೋಷ್ಠಿಯಲ್ಲಿ ಜೀರ್ಣೊದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಪ್ರಭಾಕರ ಪ್ರಭು ,ದುರ್ಗಾದಾಸ್ ಶೆಟ್ಟಿ ಕರೆಂಕಿಜೆ , ಜೀರ್ಣೊದ್ದಾರ ಸಮಿತಿಯ ಅಧ್ಯಕ್ಷರಾದ ಗಂಗಾಧರ ಗೌಡ ಕುಕ್ಕೇಡಿ ,ಗುರಿಕಾರರಾದ ಗೋಪಾಲ ಗೌಡ, ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಹೇಮಚಂದ್ರ ಗೌಡ ಸಿದ್ದಕಟ್ಟೆ ,ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಉಮೇಶ್ ಗೌಡ ಮಂಚಕಲ್ಲು ಉಪಸ್ಥಿತರಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.