
ಕಲ್ಲಡ್ಕ ಸಮೀಪದ ಗೋಳ್ತಮಜಲು ಜೆಮ್ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ.




ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 27 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 14 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ರಹ್ಮ ಹಾಗೂ ಫಾತಿಮತ್ ಸುಹಾ(598), ಶೇಝ(595), ರಹೀಶ್ ಅಜ್ಮಲ್ (559) ಅಂಕಗಳನ್ನು ಪಡೆದು ಶಾಲೆಯಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.



Be the first to comment on "ಗೋಳ್ತಮಜಲ್ ಜೆಮ್ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಶಾಲೆಗೆ ಶೇಕಡಾ 100 ಫಲಿತಾಂಶ"