ಬೈಕ್ ಅಪಘಾತದಲ್ಲಿ ಇಹಲೋಕ ತ್ಯಜಿಸಿದ ವಿಡಿಯೋಗ್ರಾಫರ್ ಕುಟುಂಬಕ್ಕೆ ಹಿಂದೂ ಟೂರಿಸ್ಟ್ ಡ್ರೈವರ್ಸ್ ವತಿಯಿಂದ ಅರ್ಥಿಕ ಸಹಾಯ ಧನ ನೀಡಲಾಯಿತು. ಇತ್ತೀಚೆಗೆ ಪಾಣೆಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ರಕ್ಷಿತ್ ರೈ ಎಂಬವರು ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ ಹಿಂದೂ ಟೂರಿಸ್ಟ್ ಡ್ರೈವರ್ಸ್ ವತಿಯಿಂದ ರೂ. 1,39,218 ಹಸ್ತಾಂತರಿಸಲಾಯಿತು.
ರೂ.1 ಲಕ್ಷ ಹಣ ರಕ್ಷಿತ್ ರೈ ಮಗಳ ಹೆಸರಲ್ಲಿ ಫಿಕ್ಸೆಡ್ ಡೆಪಾಸಿಟ್ ಇಡಲಾಗಿದ್ದು, ಉಳಿದ ಮೊತ್ತ 39,218 ರೂಪಾಯಿಯನ್ನು ರಕ್ಷಿತ್ ರೈ ಅವರ ತಾಯಿಗೆ ಹಸ್ತಾಂತರ ಮಾಡಲಾಯಿತು. ರಕ್ಷಿತ್ ಅವರು ವೃತ್ತಿಯಲ್ಲಿ ವಿಡಿಯೋಗ್ರಾಫರ್ ಆಗಿದ್ದು, ಜೊತೆಗೆ ಕಳೆದ ಹಲವಾರು ವರ್ಷಗಳಿಂದ ಹಿಂದೂ ಟೂರಿಸ್ಟ್ ಡೈವರ್ಸ್ ನ ಸದಸ್ಯರಾಗಿದ್ದರು. ಗ್ರೂಪ್ ನ ಅಡ್ಮಿನ್ ಹಾಗೂ ಸಂಘದ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬೈಕ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಹಾಯಧನ ವಿತರಣೆ"
Be the first to comment on "ಬೈಕ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಹಾಯಧನ ವಿತರಣೆ"