ರೈಲು ಪ್ರಯಾಣದ ವೇಳೆ ಮಹಿಳೆಗೆ ಹೆರಿಗೆ, ಸಿಬ್ಬಂದಿಯಿಂದ ತುರ್ತು ವೈದ್ಯಕೀಯ ನೆರವು

On arrival at Bantwala Railway Station at 19:22 hrs, a pregnant lady passenger, identified as Smt. Ponnamma, travelling in a general coach, was found to be in distress and experiencing heavy bleeding. Railway staff immediately alerted medical emergency services and arranged for an ambulance.

ಮುರ್ಡೇಶ್ವರದಿಂದ ಬೆಂಗಳೂರಿಗೆ ತೆರಳುವ ರೈಲಿನಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರಿಗೆ ಹೆರಿಗೆ ನೋವು ಉಂಟಾದ ವೇಳೆ ತುರ್ತು ವೈದ್ಯಕೀಯ ನೆರವು ಒದಗಿಸಿ, ಶಿಶುವಿನ ಸುರಕ್ಷಿತ ಜನನಕ್ಕೆ ರೈಲ್ವೆ ಸಿಬ್ಬಂದಿ ಹಾಗೂ ಸಹಪ್ರಯಾಣಿಕರು ನೆರವಾದರು.

ಬಂಟ್ವಾಳ ರೈಲು ನಿಲ್ದಾಣಕ್ಕೆ ಸಂಜೆ 19:22 ಗಂಟೆಗೆ ಆಗಮಿಸಿದಾಗ, ಸಾಮಾನ್ಯ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಪೊನ್ನಮ್ಮ ಅವರು ಗಂಭೀರ ಸ್ಥಿತಿಯಲ್ಲಿ ರಕ್ತಸ್ರಾವದಿಂದ ಬಳಲುತ್ತಿರುವುದು ಕಂಡುಬಂದಿತು. ತಕ್ಷಣವೇ ರೈಲ್ವೆ ಸಿಬ್ಬಂದಿ ತುರ್ತು ವೈದ್ಯಕೀಯ ಸೇವೆಗಳಿಗೆ ಮಾಹಿತಿ ನೀಡಿ ಆಂಬುಲೆನ್ಸ್ ವ್ಯವಸ್ಥೆ ಮಾಡಿದರು.ಆಂಬುಲೆನ್ಸ್ ಬರುವುದಕ್ಕೂ ಮುನ್ನವೇ, ಆ ಮಹಿಳೆ ಸಹಪ್ರಯಾಣಿಕ ಮಹಿಳೆಯ ನೆರವಿನಿಂದ ಗಂಡು ಮಗುವಿಗೆ ಜನ್ಮ ನೀಡಿದರು. ಎಸ್ಕಾರ್ಟಿಂಗ್ ಸಿಬ್ಬಂದಿಗಳಾದ ಅರುಣ ಎಸ್. ಎಸ್., ಶಂಕರಮೂರ್ತಿ ಸಮಯೋಚಿತ ನೆರವು ನೀಡಿದರು.

ಜಾಹೀರಾತು
VNR GOLD

ಹೆರಿಗೆಯ ನಂತರ ತಾಯಿ ಮತ್ತು ನವಜಾತ ಶಿಶುವನ್ನು ಆಂಬುಲೆನ್ಸ್ ಮೂಲಕ ಬಂಟ್ವಾಳದ ಸೋಮಯಾಜಿ ಖಾಸಗಿ ಆಸ್ಪತ್ರೆಗೆ ಸುರಕ್ಷಿತವಾಗಿ ಸಾಗಿಸಲಾಯಿತು. ತಾಯಿ ಮತ್ತು ಮಗು ಇಬ್ಬರೂ ಸ್ಥಿರ ಸ್ಥಿತಿಯಲ್ಲಿದ್ದು, ಮಗು ಅವಧಿಗೂ ಮುಂಚೆ ಜನಿಸಿದ ಕಾರಣ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ರೈಲು ಪ್ರಯಾಣದ ವೇಳೆ ಮಹಿಳೆಗೆ ಹೆರಿಗೆ, ಸಿಬ್ಬಂದಿಯಿಂದ ತುರ್ತು ವೈದ್ಯಕೀಯ ನೆರವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*