ಮನಸ್ಸು ಅರಳಿಸುವುದು ಸಾಹಿತ್ಯ: ಕವಯಿತ್ರಿ ವೆಂಕಟೇಶ್ವರಿ ಕೃಷ್ಣಭಟ್ ಪುದುಕೋಳಿ ಅವರ ಕವನ ಸಂಕಲನ ಬಿಡುಗಡೆ

ಮಂಗಲಪದವು: ಸಾಹಿತ್ಯವು ಓದುಗರ ವಿಚಾರಗಳನ್ನು ಪ್ರಚೋದಿಸಿ ಮನಸ್ಸನ್ನು ಅರಳಿಸುತ್ತದೆ, ವ್ಯಕ್ತಿತ್ವವನ್ನು ಸುಸಂಸ್ಕೃತಗೊಳಿಸುತ್ತದೆ ಎಂದು ಪುತ್ತೂರಿನ ಅಂಕಣಕಾರ ಮತ್ತು ನಿವೃತ್ತ ಪ್ರೊಫೆಸರ್ ಪ್ರೊ. ವಿ. ಬಿ. ಅರ್ತಿಕಜೆ ಹೇಳಿದರು.

ವಿಟ್ಲ ಸಮೀಪದ ಮಂಗಲಪದವಿನಲ್ಲಿ ಕವಯಿತ್ರಿ ವೆಂಕಟೇಶ್ವರಿ ಕೃಷ್ಣಭಟ್ ಪುದುಕೋಳಿ ಅವರು ರಚಿಸಿದ ಭಕ್ತಿಗೀತೆಗಳ ಸಂಕಲನ ‘ಭಕ್ತಿಕುಸುಮಾಂಜಲಿ’ ಬಿಡುಗಡೆಗೊಳಿಸಿ ಅವರು ಮಾತಾಡುತ್ತಿದ್ದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಅಧ್ಯಾಪಕ ಜಿ. ಪಿ. ವೆಂಕಟರಾವ್ ವಾದ್ಯಕೋಡಿ, ಕೃಷ್ಣಭಟ್ ಪುದುಕೋಳಿ ಮತ್ತು ರಾಮಚಂದ್ರ ಭಟ್ ಮಂಗಲಪದವು ಆಗಮಿಸಿದ್ದರು.

ಜಾಹೀರಾತು

ಸಾಹಿತಿ ಮತ್ತು ಮಂಗಳೂರು ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ. ವಸಂತಕುಮಾರ ಪೆರ್ಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇತ್ತೀಚಿನ ದಿನಗಳಲ್ಲಿ ಭಕ್ತಿ ಸಾಹಿತ್ಯ ಎಂಬುದು ಕಣ್ಮರೆಯಾಗುತ್ತಿದೆ. ಭಾರತದಲ್ಲಿ, ಅದರಲ್ಲೂ ಕನ್ನಡದಲ್ಲಿ ಭಕ್ತಿ ಸಾಹಿತ್ಯಕ್ಕೆ ಬಹು ದೊಡ್ಡ ಪರಂಪರೆ ಇದೆ. ಭಾಜನಾ ತಂಡಗಳಿಗೆ ಮತ್ತು ನೃತ್ಯಭಜನೆ ಮಾಡುವವರಿಗೆ ಇಂತಹ ಭಕ್ತಿಗೀತೆಗಳ ಅಗತ್ಯ ತುಂಬ ಇದೆ. ಆರುನೂರಕ್ಕಿಂತ ಹೆಚ್ಚು ಭಕ್ತಿಗೀತೆಗಳನ್ನು ರಚಿಸಿರುವ ಶ್ರೀಮತಿ ವೆಂಕಟೇಶ್ವರಿ ಕೃಷ್ಣಭಟ್ ಅವರ ಸಾಧನೆ ದೊಡ್ಡದು ಎಂದು ಡಾ. ವಸಂತಕುಮಾರ ಪೆರ್ಲ ಅವರು ಹೇಳಿದರು.

ಎಲೆಮರೆಯ ಕಾಯಿಗಳಂತೆ ಗ್ರಾಮಾಂತರ ಪ್ರದೇಶಗಳಲ್ಲಿ ನೆಲೆಸಿರುವ ಲೇಖಕರನ್ನು ಮತ್ತು ಕವಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯ ಇದೆ. ಇಂದಿನ ಸಾಹಿತ್ಯದಲ್ಲಿ ಗ್ರಾಮೀಣ ಬದುಕಿನ ಸೊಗಡು ಕಡಿಮೆಯಾಗುತ್ತಿದ್ದು ಅದಕ್ಕೆ ಉತ್ತೇಜನ ನೀಡಬೇಕಾಗಿದೆ. ಹಳ್ಳಿಯ ಜೀವಸತ್ವದಿಂದ ಮತ್ತೆ ಉತ್ತಮ ಸಾಹಿತ್ಯ ಮೂಡಿ ಬರಬೇಕಾಗಿದೆ ಎಂದು ಡಾ. ಪೆರ್ಲ ಅವರು ಹೇಳಿದರು.

ಕವಯಿತ್ರಿ ವೆಂಕಟೇಶ್ವರಿ ಕೃಷ್ಣಭಟ್ ತನ್ನ ಸಾಹಿತ್ಯ ರಚನೆಯ ಹಿಂದಿನ ಪ್ರೇರಣೆಗಳ ಕುರಿತು ಮಾತಾಡಿದರು. ಶ್ರೀಮತಿ ಅಶ್ವಿನಿ ಭರತ್ ಕೋಡ್ಲ ಪುಸ್ತಕದಿಂದ ಆಯ್ದ ಗೀತೆಗಳನ್ನು ಹಾಡಿದರು.

ಶ್ರೀಮತಿ ಸೀಮಾ ಗಣೇಶಚಂದ್ರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕುಮಾರಿಯರಾದ ಸಮೃದ್ಧಿ ಎಸ್. ಭಟ್ ಮತ್ತು ಶ್ರೀಸ್ಮೃತಿ ಎಲ್. ಪಿ. ಪ್ರಾರ್ಥನೆ ಹಾಡಿದರು. ಅಧ್ಯಾಪಕರಾದ ಶಿವಕುಮಾರ್ ಅಳಿಕೆ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೀಶ ಪುದುಕೋಳಿ ವಂದಿಸಿದರು

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮನಸ್ಸು ಅರಳಿಸುವುದು ಸಾಹಿತ್ಯ: ಕವಯಿತ್ರಿ ವೆಂಕಟೇಶ್ವರಿ ಕೃಷ್ಣಭಟ್ ಪುದುಕೋಳಿ ಅವರ ಕವನ ಸಂಕಲನ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*