ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಒತ್ತಾಯಿಸಿ ಜನಾಂದೋಲನ ನಡಿಗೆ ಏಪ್ರಿಲ್ 28ರಂದು ನಡೆಯಲಿದೆ. ಸಂಜೆ 4 ಗಂಟೆಯಿಂದ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡಿಗೆ ಆರಂಭಗೊಳ್ಳುವುದು. ‘
ಬ್ರಹ್ಮರಕೂಟ್ಲು ಟೋಲ್ ಗೇಟ್ ವರೆಗೆ ನಡೆಯುವ ಪಾದಯಾತ್ರೆಯಲ್ಲಿ ಜಿಲ್ಲೆಯ ಹಲವು ಮುಖಂಡರು ಪಾಲ್ಗೊಳ್ಳುವರು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆ ಬಂಟ್ವಾಳ ಸದಸ್ಯರ ಸಹಿತ ಹಲವು ಸಂಘಟನೆಗಳು ಸಾಥ್ ನೀಡಲಿವೆ ಎಂದು ಪ್ರಕಟಣೆ ತಿಳಿಸಿದೆ.