ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಪ್ರತಿಭಾ ದಿನೋತ್ಸವ

ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜು, ವಾರ್ಷಿಕೋತ್ಸವ ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನೋತ್ಸವ ಮಂಗಳವಾರ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿ ತುಳುನಾಡಿನ ಮಹಿಮೆ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿದಿರುವ ಭೂತಾರಾಧನೆಯಂತಹ ಆಚಾರಗಳು ಬೇರೆ ಕಡೆಗಳಲ್ಲಿ ಸಿಗದ ನಮ್ಮ ಮಣ್ಣಿನ ವಿಶೇಷತೆ ಎಂದರು.
ರಂಗಭೂಮಿ ಕಲಾವಿದ ತುಳುನಾಡ ರಂಗಬೊಳ್ಳಿ ಪ್ರಶಸ್ತಿ ವಿಜೇತ ರವಿ ರಾಮಕುಂಜ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಸಾಹಿತಿಗಳಾದ ಡಾ. ಲಕ್ಷ್ಮೀ ಜಿ ಪ್ರಸಾದ್, ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ಚೇತನ್ ರೈ ಮಾಣಿ ಚಲನಚಿತ್ರ ನಟಿ ವೆನ್ಯಾ ರೈ, ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಅಭ್ಯಾಗತರಾಗಿ ಆಗಮಿಸಿದ್ದರು.

VNR GOLD

ಡಾ. ಲಕ್ಷ್ಮೀ ಜಿ ಪ್ರಸಾದ್ ಮಾತನಾಡಿ, ಪ್ರತಿಯೊಬ್ಬನೂ ಅವಕಾಶಕ್ಕಾಗಿ ಕಾಯುತ್ತಾ ಪ್ರತಿಭೆಯ ಸದುಪಯೋಗ ಮಾಡಿಕೊಳ್ಳುವುದರಿಂದ ಯಶಸ್ಸು ಸಾಧ್ಯ. ನಮ್ಮ ಪ್ರತಿಭೆಗಳಿಗೆ ಮನ್ನಣೆ ಸಿಗಲು ನಮ್ಮ ಪ್ರಯತ್ನ ಮುಖ್ಯ ಎಂದರು.

ಜಾಹೀರಾತು

೨೦೨೫-೨೬ನೇ ಶೈಕ್ಷಣಿಕ ವ?ದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು, ವಿವಿಧ ಕಾಲೇಜು, ಅಂತರ್ ಕಾಲೇಜು, ಅಂತರ್ ವಿಶ್ವವಿದ್ಯಾಲಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಅತಿಥಿಗಳು ಅಭಿನಂದಿಸಿ ಪುರಸ್ಕರಿಸಿದರು.

ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬರಹಗಾರ್ತಿ ಡಾ. ಲಕ್ಷ್ಮೀ ಜಿ ಪ್ರಸಾದ್ ಅವರ “ಕರಾವಳಿಯ ಸಾವಿರದೊಂದು ದೈವಗಳು (ಮೂರನೆಯ ಮುದ್ರಣ) ಪುಸ್ತಕ ಬಿಡುಗಡೆ ಸಹ ಈ ಸಂದರ್ಭ ನಡೆಯಿತು.

ಕಾಲೇಜಿನ ವಿದ್ಯಾರ್ಥಿಗಳಿಗೆ ಭೂಲೋಕದಲ್ಲಿ ಯಮಧರ್ಮ ಎಂಬ ನಾಟಕವನ್ನು ನಿರ್ದೇಶಿಸಿದ ನಾಟಕ ನಿರ್ದೇಶಕ ಮತ್ತು ಪತ್ರಕರ್ತ ಮೌನೇಶ್ ವಿಶ್ವಕರ್ಮ ಅವರನ್ನು ಅಭಿನಂದಿಸಲಾಯಿತು.

ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಹಾಗೂ ಪ್ರಾಂಶುಪಾಲ ಕೃಷ್ಣಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರಕಟ್ಟೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂತಿಮ ಬಿಸಿಎ ವಿದ್ಯಾರ್ಥಿನಿ ದಿವ್ಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಬಿಎ ವಿದ್ಯಾರ್ಥಿ ಅಕ್ಷಯ ನರಸಿಂಹ ವಂದಿಸಿದರು.ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಮೌನೇಶ್ ವಿಶ್ವಕರ್ಮ ನಿರ್ದೇಶನದ “ಭೂಲೋಕದಲ್ಲಿ ಯಮಧರ್ಮ” ಎಂಬ ನಾಟಕವು ಪ್ರದರ್ಶನಗೊಂಡಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.