ಬಂಟ್ವಾಳ ವಕೀಲರ ಸಂಘದ ವಾರ್ಷಿಕೋತ್ಸವ, ವಾರ್ಷಿಕ ಸ್ನೇಹ ಮಿಲನ ಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಅನಿಲ್ ಪ್ರಕಾಶ್ ಎಂ ಪಿ ಉದ್ಘಾಟಿಸಿದರು.
ಈ ಸಂದರ್ಭ ಹಿರಿಯ ವಕೀಲ ಪುಂಡಿಕಾಯ್ ನಾರಾಯಣ ಭಟ್ ಅವರನ್ನು ಸನ್ಮಾನಿಸಲಾಯಿತು. ವೃತ್ತಿ ಜೀವನದ 50 ವರ್ಷಗಳನ್ನು ಪೂರೈಸಿದ ಹಿನ್ನೆಲೆ ಅವರ ಶಿಷ್ಯ ವೃಂದ ಮತ್ತು ವಕೀಲರ ಸಂಘ ಬಂಟ್ವಾಳ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಕೀಲರು ಮತ್ತು ವಕೀಲರ ಮಕ್ಕಳನ್ನು ಗೌರವಿಸಲಾಯಿತು.
ಮುಖ್ಯ ಅತಿಥಿಯಾಗಿ ಬಂಟ್ವಾಳದ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಹಾಗೂ ಉದ್ಯಮಿ ಸುರೇಶ್ ವಿ ಬಾಳಿಗ ಉಪಸ್ಥಿತರಿದ್ದರು. ಜಿಲ್ಲಾ ವಕೀಲರ ಸಂಘ ಜಿಲ್ಲಾಧ್ಯಕ್ಷ ಹಾಗೂ ವಕೀಲರ ಸಂಘ ಬಂಟ್ವಾಳದ ಅಧ್ಯಕ್ಷ ರಿಚರ್ಡ್ ಕೋಸ್ತ ಎಂ ಅಧ್ಯಕ್ಷತೆ ವಹಿಸಿದ್ದರು.
ವಕೀಲರ ಸಂಘ ಬಂಟ್ವಾಳದ ಪ್ರಧಾನ ಕಾರ್ಯದರ್ಶಿ ನರೇಂದ್ರನಾಥ ಭಂಡಾರಿ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಅಕ್ಷತಾ ಶೆಟ್ಟಿ ವಂದಿಸಿದರು. ಗಿರೀಶ್ ಮುಳಿಯಾಲ ಕಾರ್ಯಕ್ರಮ ನಿರ್ವಹಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು