ಬಂಟ್ವಾಳ: ಮಂಗಳೂರು ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಬಂಟ್ವಾಳದ ಶಾಖೆ ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಉದ್ಘಾಟನೆಗೊಂಡಿತು.
ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್ ಪಿ ಚಂಗಪ್ಪ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ ಪಿ ಉಪಸ್ಥಿತರಿದ್ದರು.
ಮಂಗಳೂರು ನ್ಯಾಯವಾದಿಗಳ ಸಹಕಾರಿ ಸಂಘ ನಿಯಮಿತ ಅಧ್ಯಕ್ಷ ವಿನಯ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಹಾಗೂ ವಕೀಲರ ಸಂಘ (ರಿ), ಬಂಟ್ವಾಳದ ಅಧ್ಯಕ್ಷರಾದ ರಿಚಾರ್ಡ್ ಕೋಸ್ತ ಎಂ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್ ಬಿ ಎನ್, ವಕೀಲರ ಸಂಘ (ರಿ),ಬಂಟ್ವಾಳದ ಪ್ರಧಾನ ಕಾರ್ಯದರ್ಶಿ ಕೆ ಎನ್ ಭಂಡಾರಿ ಉಪಸ್ಥಿತರಿದ್ದರು. ಬಂಟ್ವಾಳ ವಕೀಲ ಸಂಘದ ಅಧ್ಯಕ್ಷರಾದ ರಿಚಾಡ್ ಕೋಸ್ತ ಎಂ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಕೆ ಎನ್ ಭಂಡಾರಿ ವಂದಿಸಿದರು. ವೀರೇಂದ್ರ ಎಂ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.