
ಬಂಟ್ವಾಳ: ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಬೆಂಗಳೂರು ಕೊಡಮಾಡುವ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ 2026 ಪ್ರಶಸ್ತಿಗೆ ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ) ಪುತ್ತೂರು ನೃತ್ಯಗುರು ಮತ್ತು ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಅಪರೇಟಿವ್ ಸೊಸೈಟಿ ನಿ ಬಿ.ಸಿ.ರೋಡ್ ಅಧ್ಯಕ್ಷರಾದ, ವಿದುಷಿ ರೋಹಿಣಿ ಉದಯ್ ಆಯ್ಕೆಯಾಗಿದ್ದಾರೆ.

ಇವರ ಭರತನಾಟ್ಯ ಕಲಾ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೇ 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಕೊಡಲಾಗುವುದು ಎಂದು ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.





Be the first to comment on "ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ನೃತ್ಯಗುರು ವಿದುಷಿ ರೋಹಿಣಿ ಉದಯ್ ಆಯ್ಕೆ"