ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಬಿ.ಸಿ.ರೋಡಿನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ಬಂಟ್ವಾಳ ಮಂಡಲ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಬಜ, ಶಿವಪ್ರಸಾದ್ ಶೆಟ್ಟಿ, ಪ್ರಮುಖರಾದ ವಿಕಾಸ್ ಪುತ್ತೂರು, ಸುಲೋಚನ ಜಿ.ಕೆ.ಭಟ್, ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ರಾಮದಾಸ್ ಬಂಟ್ವಾಳ, ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರಭಾಕರ್ ಪ್ರಭು, ದಿನೇಶ್ ಶೆಟ್ಟಿ ದಂಬೆದಾರ್, ಗಣೇಶ್ ದಾಸ್, ಪ್ರಣಾಮ್ ಅಜ್ಜಿಬೆಟ್ಟು, ಮಹೇಶ್ ಶೆಟ್ಟಿ, ಭಾಸ್ಕರ ಟೈಲರ್, ಕಾರ್ತಿಕ್ ಬಲ್ಲಾಳ್, ಸದಾನಂದ ಹಳೆಗೇಟು, ಕೇಶವ ದೈಪಲ, ಮನೋಜ್ ಕಳ್ಳಿಗೆ, ಪ್ರೇಮನಾಥ ಶೆಟ್ಟಿ, ಸುನಿಲ್ ರೋಡ್ರಿಗಸ್, ಎಲಿಯಾಸ್ ಮತ್ತಿತರರು ಉಪಸ್ಥಿತರಿದ್ದರು.