ದಾವಣಗೆರೆ ಕ್ಷೇತ್ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಮರ್ಥ್ ಶಾಮನೂರು ಮುನ್ನಡೆಯಲಿದ್ದಾರೆ. ಒಟ್ಟು 21 ಸುತ್ತಿನ ಮತ ಎಣಿಕೆ ನಡೆಯಲಿದ್ದು, ಇದರಲ್ಲಿ 9ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ಬಳಿಕ ಕಾಂಗ್ರೆಸ್ ನ ಸಮರ್ಥ್ 30530, ಬಿಜೆಪಿಯ ಶ್ರೀನಿವಾಸ ಟಿ. ದಾಸಕರಿಯಪ್ಪ 26544, ಎಸ್.ಡಿ.ಪಿ.ಐ.ನ ಅಫ್ಸರ್ ಕೊಡ್ಲಿಪೇಟೆ 10568 ಮತ ಗಳಿಸಿದ್ದಾರೆ. ಸಮರ್ಥ್ 3986 ಮತಗಳ ಅಂತರದಲ್ಲಿ ಮುಂದಿದ್ದಾರೆ. ಇತ್ತೀಚಿನ ವರದಿ ಬಂದಾಗ ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಉಮೇಶ್ ಮೇಟಿ 78482 ಮತ ಗಳಿಸಿ ಸಮೀಪದ ಪ್ರತಿಸ್ಪರ್ಧಿಗಿಂತ 14 ಸಾವಿರ ಮತಗಳಿಗೂ ಹೆಚ್ಚು ಅಂತರದಲ್ಲಿ ಮುಂದೆ ಇದ್ದರು. ಬಿಜೆಪಿಯ ಹಿರಿಯ ರಾಜಕಾರಣಿ ವೀರಣ್ಣ ಚರಂತಿಮಠ 63607 ಮತ ಗಳಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ದಾವಣಗೆರೆ, ಬಾಗಲಕೋಟೆ: ಕಾಂಗ್ರೆಸ್ ಮುನ್ನಡೆ, ಸಿಎಂಗೆ ಗೆಲುವಿನ ವಿಶ್ವಾಸ"
Be the first to comment on "ದಾವಣಗೆರೆ, ಬಾಗಲಕೋಟೆ: ಕಾಂಗ್ರೆಸ್ ಮುನ್ನಡೆ, ಸಿಎಂಗೆ ಗೆಲುವಿನ ವಿಶ್ವಾಸ"