ಬಂಟ್ವಾಳ

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

ವಿದ್ಯಾರ್ಥಿಗಳು ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳ ಸದುಪಯೋಗಪಡಿಸಿಕೊಳ್ಳುವುದರ ಮೂಲಕ ಸಾಹಿತ್ಯಾಭಿರುಚಿಯನ್ನು ಬೆಳೆಸಿಕೊಳ್ಳಬೇಕೆಂದು ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ ಹೇಳಿದರು.

ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮೀ ಮಹಾವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತು ದೇಶದಲ್ಲಿಯೇ ಅತ್ಯಂತ ವ್ಯವಸ್ಥಿತವಾಗಿ ರಚನೆಯಾದ ಸಂಸ್ಥೆಯಾಗಿದ್ದು, ಕನ್ನಡ ಭಾಷೆ, ಸಾಹಿತ್ಯದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ ಎಂದವರು ಹೇಳಿದರು.

ಜಾಹೀರಾತು

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶ್ರೀ ಮಹಾಬಲೇಶ್ವರ ಹೆಬ್ಬಾರ್‌ ಭಾಷೆ ಇತಿಹಾಸವನ್ನು ಕೊಂಡೊಯ್ಯುವ ಪ್ರವಾಹವಿದ್ದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆಗೆ ಕಾರಣರಾದ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್, ದಿವಾನರಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಹಾಗೂ ಸರ್ ಮಿರ್ಜಾ ಇಸ್ಮಾಯಿಲ್‌ರವರ ಕೊಡುಗೆ ಅಪಾರವಾಗಿದೆ ಎಂದರು.

ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಎಂ.ಡಿ.ಮಂಚಿ ಅಧ್ಯಕ್ಷತೆ ವಹಿಸಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯ ಉಳಿವು ಹಾಗೂ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದೆ. ಈ ಸಂಸ್ಥೆ ಯಾವುದೇ ಪ್ರಚಾರ ಬಯಸದೇ ಸಾಹಿತ್ಯ ಪ್ರಚಾರಕ್ಕೆ ಅವಿರತ ಶ್ರಮಿಸುತ್ತಿದೆ ಎಂದು ನುಡಿದರು.

ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಅಧ್ಯಕ್ಷ ವಿಶ್ವನಾಥ  ಬಂಟ್ವಾಳ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ  ಪೂವಪ್ಪ ನೇರಳೆಕಟ್ಟೆ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಶಿವಣ್ಣ ಪ್ರಭು ಸ್ವಾಗತಿಸಿದರು, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸುಯೋಗವರ್ಧನ್ ಡಿ.ಎಮ್. ವಂದಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ.ಕಾಶೀನಾಥ ಶಾಸ್ತ್ರಿ ಎಚ್.ವಿ. ನಿರೂಪಿಸಿದರು. ವಿದ್ಯಾರ್ಥಿನಿಯರಾದ ವಂದಿತಾ ಮತ್ತು ಪನ್ನಗಶ್ರೀ ನಾಡಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿ ಸದಸ್ಯರು ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.