ಕಲ್ಲಡ್ಕ

ವೀರಕಂಭ: ನೂತನ ಸಭಾಂಗಣ ರಚನೆಗೆ ನೆರವು ಹಸ್ತಾಂತರ

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲಾ ನೂತನ ಸಭಾ ಭವನ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ  ಮಂಜುರಾದ  ಅನುದಾನದ  ಮಂಜುರಾತಿ ಪತ್ರ  ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಶಾಲೆಗೆ 75 ಸಾವಿರ ರೂ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರ  ಹಸ್ತಾಂತರ ಕಾರ್ಯಕ್ರಮ ಮಂಗಳವಾರ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ ಮಂಜೂರಾತಿ ಪತ್ರ  ಹಸ್ತಾಂತರ ಮಾಡಿ ಮಾತನಾಡಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಪ್ರಾತಿನಿಧ್ಯ ನೀಡುವ ಸಲುವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ವೀರೇಂದ್ರ ಹೆಗ್ಗಡೆ ಅವರ ದೂರ ದೃಷ್ಟಿಯ ಹಲವಾರು ಯೋಜನೆಗಳಿದ್ದು, ಗ್ರಾಮೀಣ ಪ್ರದೇಶದ ಶಾಲೆಗಳ ಅಭಿವೃದ್ಧಿಯ ಜೊತೆಗೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ  ಸಹಕಾರಿಯಾಗಿದೆ ಎಂದರು.

ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ವೀರಪ್ಪ ಮೂಲ್ಯ ಬೆತ್ತಸರವು ,ಚಿನ್ನಾ ಮೈರಾ, ಕಲ್ಲಡ್ಕ ವಲಯದ ಮೇಲ್ವಿಚಾರಕ ಸುಖರಾಜ್, ವೀರಕಂಭ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ವಿಜಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ  ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟು, ನಿಯೋಜಿತ ಅಧ್ಯಕ್ಷ ಗಣೇಶ್, ಕಲ್ಲಡ್ಕ ವಲಯದ ಮಾಜಿ ಅಧ್ಯಕ್ಷ ಶೇಖರ ಕಾಣೆಕೋಡಿ, ವೀರಕಂಭ ಒಕ್ಕೂಟ ಅಧ್ಯಕ್ಷೆ ಶಾಂಭವಿ ಆಚಾರ್ಯ, ಪದಾಧಿಕಾರಿಗಳಾದ ಆನಂದ ಮಜಿ, ಪ್ರೇಮ ಆಚಾರ್ಯ, ಮಜಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ ಸಿಂಗೇರಿ, ಶಾಲಾ ಹಿರಿಯ ಶಿಕ್ಷಕಿ ಸಂಗೀತ ಶರ್ಮ  ಪಿ ಜಿ, ಗೌರವ ಶಿಕ್ಷಕಿರಾದ ಹರಿಣಾಕ್ಷಿ, ಪಲ್ಲವಿ, ಮಕ್ಕಳ ಪೋಷಕರಾದ ರಶ್ಮಿತಾ  ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
VNR GOLD
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.