ಫರಂಗಿಪೇಟೆಯಲ್ಲಿ ನಡೆದ ಅಪಘಾತದಲ್ಲಿ ಲಾರಿಯೊಂದು ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಸಲಾವುದ್ದೀನ್ ಮೃತಪಟ್ಟವರು.
ಮಂಗಳೂರು ಬೆಂಗಳೂರು ದ್ವಿಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಲಾರಿಯೊಂದನ್ನು ಅದರ ಚಾಲಕ ಎಡಬದಿಗೆ ಚಲಾಯಿಸಿಕೊಂಡು ಬಂದು, ಸೇವಾಂಜಲಿ ಹಾಲ್ ಎದುರು ರಸ್ತೆ ಬದಿ ಪಾದಚಾರಿ ಸಲಾವುದ್ದೀನ್ ಅವರಿಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಕಾರಿನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋಗಿದ್ದು, ಅಲ್ಲಿ ಪರಿಶೀಲಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.