ಮೇ 8ರಿಂದ 10: ಕದ್ರಿ ಪಾರ್ಕ್ ನಲ್ಲಿ ಗೇರು- ಮಾವು ಮೇಳ: ಸಾರ್ವಜನಿಕರಿಗೆ ಮುಕ್ತ ಪ್ರವೇಶ

ರೈತ ಕುಡ್ಲ ಪ್ರತಿಷ್ಠಾನ, ಸಿರಿ ತೋಟಗಾರಿಕೆ ಸಂಘ ಮಂಗಳೂರು ಮತ್ತು ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಸಹಯೋಗದೊಂದಿಗೆ ಗೇರು- ಮಾವು- ಹಲಸು ಮೇಳ ಮೇ 8, 9,10 ರಂದು ಕದ್ರಿ ಪಾರ್ಕ್ ನಲ್ಲಿ ನಡೆಯಲಿದೆ.

VNR GOLD

ಸಕ್ಕರೆ, ನೀರು ಬೆರೆಸದ ತಾಜಾ ಗೇರು ಹಣ್ಣಿನ ಜ್ಯೂಸ್, ಗೇರು ಹಣ್ಣಿನ ಬೆಲ್ಲ, ಐಸ್ ಕ್ರೀಂ, ಉಪ್ಪಿನ ಕಾಯಿ, ಬರ್ಫಿ, ಕ್ಯಾಶ್ಯು ಆಪಲ್ ಮಫಿನ್ಸ್, ಸ್ವಾಶ್, ಹಲ್ವ, ಶೀರಾ, ಪಾಯಸ, ಗೇರು ಬೀಜದ ಮೊಳಕೆ, ಬಿಸ್ಕತ್ತು, ಸುಕಾಜು ಇನ್ನೂ ಹಲವಾರು ಗೇರು ಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ. ನಗರದಲ್ಲೂ ಬೆಳೆಸಬಹುದಾದ ಗೇರು ಸಸಿಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.

60ಕ್ಕೂ ಅಧಿಕ ಬಗೆಯ ತಳಿಗಳ ಮಾವು ಪ್ರದರ್ಶನ ಮತ್ತು ಮಾರಾಟ ಇರಲಿದೆ. ರಾಮನಗರ, ಅಂಕೋಲ, ಕೋಲಾರ ಮೊದಲಾದೆಡೆಯಿಂದ ರೈತರು ಭಾಗಿಯಾಗಿ ನೇರ ಮಾರಾಟ ಕೈಗೊಳ್ಳುವರು. ವಿವಿಧ ತಳಿಗಳ ಹಲಸಿನ ಮಾರಾಟ ಇರಲಿದೆ.

ಜಾಹೀರಾತು

ಮೇ 8ರಂದು ಬೆಳಗ್ಗೆ 11 ಗಂಟೆಗೆ  ಅಡಿಕೆ ಪತ್ರಿಕೆ ಸಂಪಾದಕ, ಗೇರು ಮೌಲ್ಯವರ್ಧನೆಯ ರೂವಾರಿ ಶ್ರೀ ಪಡ್ರೆ ಕಾರ್ಯಕ್ರಮ ಉದ್ಘಾಟಿಸುವರು. ಸಿರಿತೋಟಗಾರಿಕೆ ಸಂಘದ ಉಪಾಧ್ಯಕ್ಷೆ ಡಾ.ಭಾರತಿ ನಿರ್ಮಲ್, ಸಾವಯವ ಕೃಷಿಕ ಗ್ರಾಹಕ ಬಳಗದ ಕಾರ್ಯದರ್ಶಿ ರತ್ನಾಕರ ಕುಳಾಯಿ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಕಾರ್ಯಕಾರಿ ಸದಸ್ಯರಾದ ಜಗನ್ನಾಥ ಗಾಂಭೀರ್, ಜಿ.ಕೆ. ಭಟ್, ರಾಮ ಮೊಗರೋಡಿ, ರೈತಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸೊರಕೆ, ಕಾರ್ಯದರ್ಶಿ ಲತೀಶ್ ಉಪಸ್ಥಿತರಿರುವರು.ಬೆಳಗ್ಗೆ 9ರಿಂದ ರಾತ್ರಿ 8 ವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇರಲಿದೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮೇ 8ರಿಂದ 10: ಕದ್ರಿ ಪಾರ್ಕ್ ನಲ್ಲಿ ಗೇರು- ಮಾವು ಮೇಳ: ಸಾರ್ವಜನಿಕರಿಗೆ ಮುಕ್ತ ಪ್ರವೇಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*