ಪ್ರಮುಖ ಸುದ್ದಿಗಳು

ಹರೀಶ್ ಮಾಂಬಾಡಿ, ಸತೀಶ್ ಇರಾ ಸೇರಿದಂತೆ 18 ಮಂದಿಗೆ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕೆಯುಡಬ್ಲುಜೆ ದತ್ತಿನಿಧಿ ಪ್ರಶಸ್ತಿ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ, ಕಾಸರಗೋಡು, ಹಾಗೂ ರಾಜ್ಯದ ವಿವಿಧ ಭಾಗಗಳ 18 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಸಹಯೋಗದೊಂದಿಗೆ ನೀಡುವ ದತ್ತಿನಿಧಿ ಪ್ರಶಸ್ತಿಯನ್ನು ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಮತ್ತು ಕೆಯುಡಬ್ಲ್ಯುಜೆ ಕಾಸರಗೋಡು ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ಘೋಷಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ಮೇ 16ರಂದು ಬೆಳಗ್ಗೆ 9 ರಿಂದ ಕಾಸರಗೋಡು ಕುಡಾಲ್ ಮೇರ್ಕಳ ಸುಬ್ಬಯ್ಯ ಕಟ್ಟೆ ಅನುದಾನಿತ ಕಿ.ಪ್ರಾ. ಶಾಲಾ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಕರ್ನಾಟಕದ ಸಚಿವ ಬೋಸರಾಜು ಮತ್ತು ಮಂಜೇಶ್ವರ ಶಾಸಕ ಅಶ್ರಫ್ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡುವರು.  ಬೆಳಗ್ಗೆ 9 ಗಂಟೆಗೆ ಪೈವಳಿಕೆ ಗ್ರಾಪಂ ಅಧ್ಯಕ್ಷೆ ಬದರುನ್ನೀಸ ಸಲೀಂ ಮತ್ತು ಹಿರಿಯ ಸಮಾಜ ಸೇವಕ ಭಂಡಾರಗುತ್ತು ಸೀತಾರಾಮ ಶೆಟ್ಟಿ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ. 11 ಗಂಟೆಗೆ ಸಭಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸುವರು. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಅಧ್ಯಕ್ಷತೆ ವಹಿಸುವರು. ವಿಧಾನಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡುವರು. ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಸೇರಿದಂತೆ ವಿವಿಧ ಗಣ್ಯರು  ಭಾಗವಹಿಸಲಿದ್ದಾರೆ ಎಂದರು.

ಜಾಹೀರಾತು


ದತ್ತಿನಿಧಿಪ್ರಶಸ್ತಿಪುರಸ್ಕೃತರು

ಹಿರಿಯ ಪತ್ರಕರ್ತರಾದ ಬಿ.ಎಂ.ಹನೀಫ್, ಕುರಿಯ ವಾಸುದೇವ ಎಂ.ಹೊಳ್ಳ, ಡಾ.ಯು.ಎಂ.ರವಿ, ವಿಜಯಲಕ್ಷ್ಮೀ ಶಿಬರೂರು, ಎಚ್.ಇ.ರವಿ ಸೋಮವಾರಪೇಟೆ, ವಿಶ್ವನಾಥ ಬೆಳಗಲ್ ಮಠ ಕೊಪ್ಪಳ, ಪ್ರಕಾಶ್ ಸುವರ್ಣ ಕಟಪಾಡಿ, ದೇವೇಂದ್ರಪ್ಪ ಆವಂಟಿ ಗುಲ್ಬರ್ಗ, ಸತೀಶ್ ಇರಾ, ಸುಭಾಷ್ ಸಿರಿಯ, ಹರೀಶ್ ಮಾಂಬಾಡಿ, ನವೀನ್ ಡಿಸೋಜ ಕೊಡಗು,  ಸಂಶುದ್ದೀನ್ ಎಣ್ಮೂರು, ಎ.ಆರ್.ಚಿದಂಬರ ಕೊರಟಗೆರೆ, ತುಮಕೂರು, ಕೆ.ಆರ್.ಮಂಜುನಾಥ ಹಾಸನ, ತೆಕ್ಕೆಕೆರೆ ಶಂಕರನಾರಾಯಣ ಭಟ್ಟ, ಸುಬ್ಬಣ್ಣ ಶೆಟ್ಟಿ ಕುಚಿಕ್ಕಾಡ್ ಅವರಿಗೆ ವಿವಿಧ ದತ್ತಿ ಪ್ರಶಸ್ತಿ ನೀಡಗೌರವಿಸಲಾಗುದು ಎಂದು ಅವರು ತಿಳಿಸಿದರು.

ಗೋಷ್ಠಿಯಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥಾಪಕ ಪ್ರದೀಪ ಕುಮಾರ ಕಲ್ಕೂರ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ.ಉಳಿಯತ್ತಡ್ಕ, ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಅಶೋಕ ಭಂಡಾರಿ ಕುಡಾಲ್, ಸಂಚಾಲಕ ರಾಘವ ಚೇರಾಲ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.