ನೇರಳಕಟ್ಟೆ ಹಾಗೂ ಕಬಕ ಪುತ್ತೂರು ನಡುವೆ ರೈಲ್ವೆ ವಿದ್ಯುತ್ ತಂತಿಗೆ ಹಾನಿ, ಸಂಚಾರ ವ್ಯತ್ಯಯ – ವಿವರಗಳು ಇಲ್ಲಿವೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ನೇರಳಕಟ್ಟೆ ಹಾಗೂ ಕಬಕ ಪುತ್ತೂರು ನಡುವೆ ರೈಲ್ವೆ ಹಳಿ ಮೇಲೆ ಮರ ಬಿದ್ದ ಕಾರಣ ವಿದ್ಯುತ್ ತಂತಿ ಹಾನಿಗೊಳಗಾಗಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ನೇರಳಕಟ್ಟೆ ಮತ್ತು ಕಬಕ ಪುತ್ತೂರು ನಡುವೆ ಮರ ಬಿದ್ದ ಪರಿಣಾಮ ವಿದ್ಯುತ್ ಲೈನ್ ಹಾನಿಗೊಳಗಾಗಿದೆ., ಇದರಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ, ವಿದ್ಯುತ್ ಇಂಜಿನ್ ಮೂಲಕ ಸಂಚರಿಸುವ ರೈಲು ಸಂಖ್ಯೆ 56627 ಮಂಗಳೂರು ಸೆಂಟ್ರಲ್ ನಿಂದ ಸುಬ್ರಹ್ಮಣ್ಯ ರೋಡ್ ಕಡೆಗೆ ತೆರಳುವ ಪ್ಯಾಸೆಂಜರ್ ರೈಲನ್ನು ನೇರಳಕಟ್ಟೆ ಹಾಲ್ಟ್‌ನಲ್ಲಿ ನಿಲ್ಲಿಸಲಾಗಿದೆ; ವಿದ್ಯುತ್ ಸಂಪರ್ಕವಿಲ್ಲದ ಕಾರಣ ಈ ರೈಲಿಗೆ ಮುಂದೆ ಚಲಿಸಲು ಸಾಧ್ಯವಾಗುತ್ತಿಲ್ಲ.

ಮತ್ತೊಂದೆಡೆ, ಡೀಸೆಲ್ ಇಂಜಿನ್ ಮೂಲಕ ಸಂಚರಿಸುವ ರೈಲು ಸಂಖ್ಯೆ 16586 ಮುರುಡೇಶ್ವರ ದಿಂದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್, ರಾತ್ರಿ 7:41ಕ್ಕೆ ಬಂಟ್ವಾಳದಿಂದ ಹೊರಟಿದೆ. ಅದನ್ನು ನೇರಳಕಟ್ಟೆ ಹಾಲ್ಟ್‌ನಲ್ಲಿ ಪ್ರಯಾಣಿಕರಿಗಾಗಿ ಈ ರೈಲಿಗೆ ತಾತ್ಕಾಲಿಕ ನಿಲುಗಡೆ ನೀಡಲಾಗಿದೆ.

ಜಾಹೀರಾತು

ತುರ್ತು ಸಂದರ್ಭದಲ್ಲಿ ಪ್ರಯಾಣಿಸಬೇಕಾದ ಪ್ರಯಾಣಿಕರು ರೈಲು ಸಂಖ್ಯೆ 16586 ಅನ್ನು ಹತ್ತಿ ಮುಂದೆ ಪ್ರಯಾಣಿಸಲು ಸೂಚಿಸಲಾಗಿದೆ. ಅದರಂತೆ, ನೇರಳಕಟ್ಟೆ ಹಾಲ್ಟ್‌ನಲ್ಲಿ ತುರ್ತು ಪ್ರಯಾಣಿಕರಿಗಾಗಿ ಈ ರೈಲಿನ ಮೂಲಕ ಪರ್ಯಾಯ ವ್ಯವಸ್ಥೆ ಮಾಡಲಾಯಿತು. (Source: (Source: Dakshina Kannada Railway Users)

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನೇರಳಕಟ್ಟೆ ಹಾಗೂ ಕಬಕ ಪುತ್ತೂರು ನಡುವೆ ರೈಲ್ವೆ ವಿದ್ಯುತ್ ತಂತಿಗೆ ಹಾನಿ, ಸಂಚಾರ ವ್ಯತ್ಯಯ – ವಿವರಗಳು ಇಲ್ಲಿವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*