ಕಲ್ಲಡ್ಕ

ನೀರಪಾದೆ ಬ್ರಹ್ಮಶ್ರೀ ನಾರಾಯಣಗುರುಮಂದಿರ ಲೋಕಾರ್ಪಣೆ: ಧಾರ್ಮಿಕ ಸಭೆ

ನೀರಪಾದೆಯ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ ವತಿಯಿಂದ ಬಾಳ್ತಿಲ ಗ್ರಾಮದ ನೀರಪಾದೆ ಎಂಬಲ್ಲಿ ವಾಸ್ತುತಜ್ಞ ಶ್ರೀನಾಥ್ ಪಿ. ಎಲ್  ದೇವದತ್ತ  ಸುಳ್ಯ ಮಾರ್ಗದರ್ಶನದಲ್ಲಿ ಪುನರ್ ನಿರ್ಮಾಣಗೊಂಡ ನೂತನ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ ಮತ್ತು  ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಮೂರ್ತಿ ಪ್ರತಿಷ್ಠಾ ಸಾನಿಧ್ಯ ಕಲಶಾಭಿಷೇಕ ಹಿನ್ನೆಲೆ ಧಾರ್ಮಿಕ ಸಭೆ ನಡೆಯಿತು.

ವಿಶ್ವ ಹಿಂದೂ ಪರಿಷತ್ ಪ್ರಾಂತ ಗೋರಕ್ಷಾ ಪ್ರಮುಖ್ ಸುನಿಲ್ ಕೆ.ಆರ್. ಚಾಲನೆ ನೀಡಿ ಮಾತನಾಡಿ, ನಾರಾಯಣ ಗುರು ಮಂದಿರಗಳು ಸಂಸ್ಕಾರವನ್ನು ಕಲಿಸುವ ಕೇಂದ್ರಗಳಾದರೆ ನಾರಾಯಣಗುರುಗಳ ಯೋಚನೆ, ಚಿಂತನೆಗಳಿಗೆ ಹೋರಾಟಗಳಿಗೆ, ತತ್ವ ಸಿದ್ದಾಂತಗಳಿಗೆ ಗೌರವ ನೀಡಿದಂತಾಗುತ್ತದೆ. ಬಾಳ್ತಿಲ ಗ್ರಾಮದ ಸರ್ವಧರ್ಮದವರು ಸೇರಿ ಧರ್ಮ ಕಾರ್ಯದಲ್ಲಿ ಕೈ ಜೋಡಿಸಿ ಮಾದರಿಯಾಗಿದ್ದಾರೆ ಎಂದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಸ್ಥಳದಾನಿ, ನಿವೃತ್ತ ಯೋಧ ಡೀಕಯ್ಯ ಪೂಜಾರಿ ಮಾತನಾಡಿ ಇನ್ನು ಮುಂದೆ ಪ್ರತಿಯೊಂದು ಒಳ್ಳೆಯ ಕೆಲಸಗಳಿಗೆ ಮಂದಿರ ಕೇಂದ್ರವಾಗಿ ನೆರಳು ನೀಡಲಿದೆ. ನಾವೆಲ್ಲರೂ ಮಾನವ ಜಾತಿ ಎಂಬ ತತ್ವದಡಿ ಕೆಲಸ ಮಾಡೋಣ ಎಂದರು.

ಜಾಹೀರಾತು

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ಚರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳು ಶೋಷಿತ ಸಮಾಜದ ಏಳಿಗೆಗೆ ಶ್ರಮಿಸಿದ ಮಹಾನ್ ಚೇತನ ಎಂದರು.

ಜವಾಹರ ಬಾಲಮಂಚ್ ಜಿಲ್ಲಾಧ್ಯಕ್ಷೆ ಶೈಲಜಾ ರಾಜೇಶ್, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ನಿ. ಅಧ್ಯಕ್ಷ ನಾಗೇಶ್ ಕಲ್ಲಡ್ಕ ಮಾತನಾಡಿ ಶುಭ ಹಾರೈಸಿದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ನಿಡ್ಯ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಟ್ರಸ್ಟ್ ಆಧ್ಯಕ್ಷ ಎ.ರುಕ್ಮಯ ಪೂಜಾರಿ, ಕಾರ್ಯದರ್ಶಿ ಮೋಹನ್ ಪಿ.ಎಸ್, ಬರಿಮಾರು ಮಹಾಮ್ಮಾಯಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ರಾಕೇಶ್ ಪ್ರಭು, ನೀರಪಾದೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕುಮಾರ್ ಕೆ ಕಾಂದಿಲ, ಸಮರ್ಪಣಾ ಟ್ರಸ್ಟ್ ವಿಟ್ಲ ಅಧ್ಯಕ್ಷ ಯಶವಂತ ಎನ್ ಪೂಜಾರಿ, ಕಶೆಕೋಡಿ ಶ್ರೀ ಲಕ್ಮೀ ವೆಂಕಟರಮಣ ದೇವಸ್ಥಾನದ ಅನುವಂಶಿಕ ಅಡಳಿತ ಮೊಕ್ತೇಸರ ಗೋಪಾಲ ಶೆಣೈ ಕಂಟಿಕ, ಎ.ಪಿ.ಎಂ.ಸಿ.ಮಾಜಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ ಕೋರ್ಯ, ಉದ್ಯಮಿ ತುಳಸಿದಾಸ್ ಮಂಗಳೂರು, ನರಿಕೊಂಬು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಸಂತೋಷ್ ಉಪಸ್ಥಿತರಿದ್ದರು. ಟ್ರಸ್ಟ್ ಹಾಗೂ ಸಮಿತಿ ಪ್ರಮುಖರು ಹಾಜರಿದ್ದರು.

ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಶರತ್ ಕುಮಾರ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ ವಂದಿಸಿದರು. ಗ್ರಾ.ಪಂ.ಮಾಜಿ ಸದಸ್ಯ ರಾಜೇಶ್ ಕೊಟ್ಟಾರಿ ಹಾಗೂ ಶಿಕ್ಷಕ ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಮೇ. 9 ರಂದು ಸಂಜೆ ಮಂದಿರಕ್ಕೆ ಧಾರ್ಮಿಕ ಕಾರ್ಯಕ್ರಮದ ವಿಧಿವಿಧಾನಗಳನ್ನು ನೆರವೇರಿಸಲು ಆಗಮಿಸಿದ ಕೇಶವ ಶಾಂತಿ ಹಾಗೂ ಬಳಗವನ್ನು ಸಮಿತಿ ಪರವಾಗಿ ಸ್ವಾಗತಿಸಲಾಯಿತು. ಬಳಿಕ ಸ್ಥಳೀಯ ಅಂಗನವಾಡಿ ಮಕ್ಕಳಿಂದ ಮತ್ತು ಇತರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸಭಾ ಕಾರ್ಯಕ್ರಮದ ನಂತರ ಸ್ಥಳೀಯ ಕಲಾವಿದರಿಂದ ಸಾಲ ಪಿರ ತಿಕ್ಕುಂಡು ನಾಟಕ ಪ್ರದರ್ಶನಗೊಂಡಿತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.