ಬಹುಗ್ರಾಮ ಕುಡಿಯುವ ನೀರಿನ ಯೋಜನೆ: ಪ್ರಗತಿ ವರದಿ ನೀಡಲು ಶಾಸಕ ರಾಜೇಶ್ ನಾಯ್ಕ್ ಸೂಚನೆ

ವಿಧಾನಸಭೆಯ ಬಂಟ್ವಾಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಜಲಜೀವನ್ ಮಿಷನ್ ಬಹುಗ್ರಾಮ ಯೋಜನೆ ಸಮಸ್ಯೆಯಿಂದ ಲಭ್ಯತೆಯಲ್ಲಿ ಅಡಚಣೆ ಉಂಟಾಗಿರುವ ಕುರಿತು ಬಂಟ್ವಾಳ ತಾಪಂ ಸಭಾಂಗಣದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕಲ್ಪಿಸುವ ನಿಟ್ಟಿನಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಪಡೆದ ಶಾಸಕ ರಾಜೇಶ್ ನಾಯ್ಕ್, ಪ್ರಗತಿ ವರದಿ ನೀಡಲು ಅಧಿಕಾರಿಗಳುಗೆ ಸೂಚಿಸಿದರು.

ಕುಡಿಯುವ ನೀರು ಪೂರೈಕೆಯನ್ನು ಪ್ರಥಮ ಆದ್ಯತೆ ನೆಲೆಯಲ್ಲಿ ಮಾಡಬೇಕು, ಯಾವುದೇ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಕ್ರಮ ಕೈಗೊಳ್ಳಲು ಸೂಚಿಸಿದರು.

ತಾಲೂಕಿನ ಪ್ರತಿಯೊಂದು ಗ್ರಾಮಾಡಳಿತ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ ಶಾಸಕ ರಾಜೇಶ್ ನಾಯ್ಕ್, ನೀರಿನ ವಿಚಾರದಲ್ಲಿ ಯಾವುದೇ ಕೊರತೆಯಾಗದಂತೆ ಹಾಗೂ ಲಭ್ಯ ಅನುದಾನ ಬಳಸಿಕೊಂಡು ತುರ್ತು ಕಾರ್ಯವನ್ನು ಮಾಡಬೇಕು ಎಂದು ತಿಳಿಸಿದರು.  ಬಂಟ್ವಾಳ ತಹಸೀಲ್ದಾರ್ ಮಂಜುನಾಥ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ಗ್ರಾಪಂ ಆಡಳಿತಾಧಿಕಾರಿಗಳು, ವಿವಿಧ ಇಲಾಖಾಧಿಕಾರಿಗಳು ಆಗಮಿಸಿ ಪೂರಕ ಮಾಹಿತಿ ನೀಡಿದರು.

ಜಾಹೀರಾತು

ಗೋಳ್ತಮಜಲು, ಬಾಳ್ತಿಲ ಸಹಿತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವ ವ್ಯಾಪ್ತಿ ಗ್ರಾಪಂಗಳಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಕಾಮಗಾರಿಯಿಂದ ಅಡಚಣೆ ಉಂಟಾದರೆ ಗಮನಕ್ಕೆ ತನ್ನಿ, ಜಲಜೀವನ್ ಮಿಷನ್ ಮತ್ತು ಮೆಸ್ಕಾಂ ಅಧಿಕಾರಿಗಳು ತಹಸೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಿ ಎಂದು ಶಾಸಕರು ಸೂಚಿಸಿದರು.ಜಕ್ರಿಬೆಟ್ಟು ಡ್ಯಾಂ ಮಾಡಿದ ಬಳಿಕ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ, ಹಿಂದೆಲ್ಲಾ ನೀರಿಗಾಗಿ ಸಮಸ್ಯೆ ಇದ್ದುದನ್ನು ನೆನಪಿಸಿದ ಅವರು, ಈಗ ವಿತರಣಾ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದರು. ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಪಂ ವ್ಯಾಪ್ತಿಗಳಲ್ಲಿನ ಸಮಸ್ಯೆಗಳ ಕುರಿತು ಗಮನ ಸೆಳೆದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಹುಗ್ರಾಮ ಕುಡಿಯುವ ನೀರಿನ ಯೋಜನೆ: ಪ್ರಗತಿ ವರದಿ ನೀಡಲು ಶಾಸಕ ರಾಜೇಶ್ ನಾಯ್ಕ್ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*