ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ, ಸಹಾಯಕಿಯರ ನೇಮಕ: ಅರ್ಜಿ ಆಹ್ವಾನ

ಬಂಟ್ವಾಳ: ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿಗೆ ಅರ್ಜಿಯನ್ನು ಬಂಟ್ವಾಳ ಶಿಶಿ ಅಭಿವೃದ್ಧಿ ಯೋಜನಾ ಕಚೇರಿಯಿಂದ ಆಹ್ವಾನಿಸಲಾಗಿದೆ. ವಿವರ ಹೀಗಿದೆ.

ಬಂಟ್ವಾಳ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕಂ ಕ್ರಷ್ ನ ಬಂಟ್ವಾಳ ಪುರಸಭೆ ವಾರ್ಡ್ ಸಂಖ್ಯೆ 13ರ ಕೈಕುಂಜೆ ಅಂಗನವಾಡಿ, ಅಮ್ಮುಂಜೆ ಗ್ರಾಮದ ಬೆಂಜನಪದವು ಅಂಗನವಾಡಿ, ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಅಂಗನವಾಡಿ, ಸಜಿಪಮುನ್ನೂರು ಗ್ರಾಮದ ನಂದಾವರ 2 ಅಂಗನವಾಡಿ ಕೇಂದ್ರದ ಕ್ರಷ್ ಕಾರ್ಯಕರ್ತೆ ಹಾಗೂ ಕ್ರಷ್ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕರ್ತೆಯರ ಮಾಸಿಕ ಗೌರವಧನ 5500 ರೂ ಹಾಗೂ ಸಹಾಯಕಿಯರ ಮಾಸಿಕ ಗೌರವಧನ 3 ಸಾವಿರ ರೂ ಆಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನಾಂಕ. ಸೂಕ್ತ ದಾಖಲೆಗಳೊಂದಿಗೆ ಅದೇ ಅಂಗನವಾಡಿ ಸರ್ವೇ ವ್ಯಾಪ್ತಿಯ 18ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಜಾಹೀರಾತು

ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹುದ್ದೆಗೆ ಕರ್ನಾಟಕ ರಾಜ್ಯದ ಪದವಿಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಅಥವಾ ತತ್ಸಮಾನ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಸಹಾಯಕಿ ಹುದ್ದೆಗೆ ಕರ್ನಾಟಕ ರಾಜ್ಯದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಲಭ್ಯವಿಲ್ಲದೆ ಇದ್ದಲ್ಲಿ ಏಳನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರನ್ನು ಪರಿಗಣಿಸಲಾಗುವುದು. ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾ ಕಚೇರಿ 08255-298562 ಅವರನ್ನು ಕಚೇರಿ ವೇಳೆ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ, ಸಹಾಯಕಿಯರ ನೇಮಕ: ಅರ್ಜಿ ಆಹ್ವಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*