ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಾಗಲು ಅವಕಾಶ

ಬಂಟ್ವಾಳ ತಾಲೂಕಿನ ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ವಿಟ್ಲ ಪಟ್ಟಣ ಪಂಚಾಯತ್ ವಾರ್ಡ್- 4 ರ ಮಹಿಳಾ ಮಂಡಲ ಅಂಗನವಾಡಿ, ವಿಟ್ಲ ಪಟ್ಟಣ ಪಂಚಾಯತ್ ವಾರ್ಡ್ 2ರ ಚಂದಳಿಕೆ ಅಂಗನವಾಡಿ, ವಿಟ್ಲ ಪಟ್ಟಣ ಪಂಚಾಯತ್ ವಾರ್ಡ್ -2ರ ಉಕ್ಕುಡ ಅಂಗನವಾಡಿ, ಮಂಚಿ ಗ್ರಾಮ ಪಂಚಾಯತ್‌ನ ಕುಕ್ಕಾಜೆ-1 ಅಂಗನವಾಡಿ, ವೀರಕಂಭ ಗ್ರಾಮ ಪಂಚಾಯತ್‌ನ ಮಂಗಿಲಪದವು ಅಂಗನವಾಡಿ, ಕೊಳ್ನಾಡು ಗ್ರಾಮ ಪಂಚಾಯತ್‌ನ ಸೇರ್ಕಳ ಅಂಗನವಾಡಿ, ಅಳಿಕೆ ಗ್ರಾಮ ಪಂಚಾಯತ್‌ನ ಭೀಮಾರ ಅಂಗನವಾಡಿ, ಕೆದಿಲ ಗ್ರಾಮ ಪಂಚಾಯತ್‌ನ ಗಡಿಯಾರ ಅಂಗನವಾಡಿ, ಕನ್ಯಾನ ಗ್ರಾಮ ಪಂಚಾಯತ್‌ನ ಕಣಿಯೂರು ಅಂಗನವಾಡಿ ಕೇಂದ್ರದ ಕಂಕ್ರಷ್ ಕಾರ್ಯಕರ್ತೆ ಹಾಗೂ ಕಂಕ್ರಷ್ ಸಹಾಯಕಿ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕಂಕ್ರಷ್ ಕಾರ್ಯಕರ್ತೆಯರ ಮಾಸಿಕ ಗೌರವಧನ ರೂ.5500 ಹಾಗೂ ಕಂಕ್ರಷ್ ಸಹಾಯಕಿಯರ ಮಾಸಿಕ ಗೌರವಧನ ರೂ.3000 ಆಗಿರುತ್ತದೆ. ದಿನಾಂಕ:30-05-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಸೂಕ್ತ ದಾಖಲೆಗಳೊಂದಿಗೆ ಅದೇ ಅಂಗನವಾಡಿ ಸರ್ವೇ ವ್ಯಾಪ್ತಿಯ 18 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸತಕ್ಕದ್ದು.

  ಅಂಗನವಾಡಿ ಕಂಕ್ರಷ್‌ನ ಕಾರ್ಯಕರ್ತೆ ಹುದ್ದೆಗೆ ಕರ್ನಾಟಕ ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿದವರನ್ನು ಪರಿಗಣಿಸಲಾಗುವುದು. ಕಂಕ್ರಷ್ ಕರ್ಯ ಕರ್ತೆ ಹಾಗೂ ಕಂಕ್ರಷ್ ಸಹಾಯಕಿ ಹುದ್ದೆಗೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಂಗನವಾಡಿ ಕೇಂದ್ರವಿರುವ ವಾರ್ಡಿನಲ್ಲಿಯೇ ವಾಸ್ತವ್ಯವಿರಬೇಕು. 6 ತಿಂಗಳೊಳಗೆ ಪಡೆದಿರುವ ತಹಶೀಲ್ದಾರರ ವಾಸ್ತವ್ಯ ದೃಢಪತ್ರ ಹೊಂದಿರಬೇಕು. ಹಾಗೂ ಕಂಕ್ರಷ್ ಸಹಾಯಕಿ ಹುದ್ದೆಗೆ ಕರ್ನಾಟಕ ರಾಜ್ಯದ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ 7ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರನ್ನು ಪರಿಗಣಿಸಲಾಗುವುದು. ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ. ಜೆರಾಕ್ಸ್ ಪ್ರತಿಗಳಿಗೆ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿರಬೇಕು. ಜನ್ಮದಿನಾಂಕಕ್ಕೆ ಸಂಬಂಧಿಸಿದಂತೆ ಜನನ ಪ್ರಮಾಣ ಪತ್ರ ಅಥವಾ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಯಾವುದಾದರೂ ಗುರುತು ಚೀಟಿ ಸಲ್ಲಿಸಬೇಕು(ಆಧಾರ್ ಕಾರ್ಡ್, ವೋಟರ್ ಐಡಿ, ಇತ್ಯಾದಿ) ಹಾಗೂ ಸರ್ವೆ ವ್ಯಾಪ್ತಿಯಲ್ಲಿ ವಾಸವಾಗಿರುವ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯಿಂದ ದೃಢೀಕರಣವವನ್ನು ಲಗತ್ತಿಸಬೇಕು.

ಜಾಹೀರಾತು

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಟ್ಲ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಕುಲಾಲ ರಜತ ಭವನ ಕಟ್ಟಡ, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಬಳಿ, ವಿಟ್ಲ ಅಂಚೆ ದೂರವಾಣಿ ಸಂಖ್ಯೆ: 08255-238080 ಇವರನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ವಿಟ್ಲ ಇವರು ತಿಳಿಸಿರುತ್ತಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಾಗಲು ಅವಕಾಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*