ಬಂಟ್ವಾಳ

ಸಂಸ್ಕಾರದಿಂದ ಕೂಡಿದ ಶಿಕ್ಷಣದಿಂದ  ವ್ಯಕ್ತಿ ಶ್ರೇಷ್ಠನಾಗಲು ಸಾಧ್ಯ: ಭವಾನಿ ಶಂಕರ್ ಭಟ್

ಇತ್ತೀಚಿನ ಸ್ಪರ್ಧಾತ್ಮಕ  ಸಮಯದಲ್ಲಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅಳವಡಿಸಿಕೊಂಡು, ವಿನಯತೆ, ಶಿಸ್ತಿನಿಂದ ನಡೆದರೆ ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಯಾಗಿ ಬೆಳೆಯಲು ಸಾಧ್ಯ ಎಂದು ಜೋತಿಷ್ಯರಾದ ವೇದಮೂರ್ತಿ ಭವಾನಿ ಶಂಕರ್ ಭಟ್  ಇರುವೈಲು ಅಭಿಪ್ರಾಯ ವ್ಯಕ್ತಪಡಿಸಿದರು.

ಬಂಟ್ವಾಳ ತಾಲೂಕು ಕರ್ಪೆ ಗ್ರಾಮದ ಕಿನ್ನಾಜೆ ಗಣಪತಿ ದೇವಸ್ಥಾನ ವಠಾರದಲ್ಲಿ ಶ್ರೀ ಮಹಾ ಗಣಪತಿ ಸೇವಾ ವೃಂದ ದ ವತಿಯಿಂದ ಜರಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಎಡಪದವು ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಗಾಯತ್ರಿ ಶಿವರಾಯ ಪ್ರಭು ಮಾತನಾಡಿ ಮಕ್ಕಳು ಶಿಕ್ಷಣ ಪಡೆಯುವ ಮೂಲಕ ಹಿರಿಯರೊಂದಿಗೆ ಗೌರವದಿಂದ ವರ್ತನೆ ಮಾಡಬೇಕು ಎಂದರು.

ಜಾಹೀರಾತು
VNR GOLD

ಅಧ್ಯಕ್ಷತೆ ವಹಿಸಿದ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕೆ. ರಮೇಶ್ ನಾಯಕ್ ರಾಯಿ ಮಾತನಾಡಿ ವಿದ್ಯಾರ್ಥಿಗಳು ಪರಸ್ಪರ ಅನುಕರಣೆಯ ಮತ್ತು ಒತ್ತಡ, ಒತ್ತಾಯದ ಒಂದೇ ರೀತಿಯ ಶಿಕ್ಷಣವನ್ನು ಪಡೆಯದೆ ಜನಪಯೋಗಿ, ಸಮಾಜಮುಖಿಗೆ ಹತ್ತಿರವಾಗಿರುವ ಆಯ್ಕೆಯತ್ತ ಯೋಚನೆ ಮಾಡಬೇಕು. ಸಂಸ್ಕೃತಿ, ಸಂಪ್ರದಾಯ ಉಳಿಸಿಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿ ಆಗುವಲ್ಲಿ ಆಡಳಿತಾತ್ಮಕವಾದ ಹುದ್ದೆಗಳ ವ್ಯವಸ್ಥೆಯತ್ತ ಆಸಕ್ತಿ ವಹಿಸಬೇಕು ಎಂದೂ ತಿಳಿಸಿದರು.

ಕಾರ್ಯಕ್ರಮದಲ್ಲಿ ಶೇ 90 ಕ್ಕಿಂತ ಅಧಿಕ ಅಂಕ ಪಡೆದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರನ್ನು ಗೌರವಿಸಲಾಯಿತು.ವೇದಿಕೆಯಲ್ಲಿ ಗಣೇಶ್ ಪ್ರಭು ಪಂಜಿಕಲ್ಲು, ದಯಾನಂದ ಭಟ್ ಬಾಳ್ತಿಲ, ನಿವೃತ್ತ ಶಿಕ್ಷಕರಾದ ಕೆ.ನಾರಾಯಣ ನಾಯಕ್, ಪ್ರಮುಖರಾದ ಪ್ರಭಾಕರ ಪ್ರಭು, ದಾಮೋದರ ನಾಯಕ್,ಶಶಿಧರ ಶೆಣೈ,  ಗೋಪಾಲಕೃಷ್ಣ ಪ್ರಭು, ಪ್ರಭಾಕರ ಪ್ರಭು, ಚಂದ್ರಶೇಖರ ಪ್ರಭು ಹೆಣ್ಣುರು, ರವೀಂದ್ರ ನಾಯಕ್ ಬೋಳಂಗಡಿ,ರಾಮರಾಯ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.ಸೇವಾ ವೃಂದದ ಅಧ್ಯಕ್ಷ ಸುಧಾಕರ ಪ್ರಭು ಸ್ವಾಗತಿಸಿದರು, ಶಿಕ್ಷಕ ಕೆ. ರವೀಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಕೆ. ರಾಮಕೃಷ್ಣ ನಾಯಕ್ ಧನ್ಯವಾದವಿತ್ತರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.