ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಪರ್ಕುಶನ್ ಇನ್ಸ್ಟ್ರುಮೆಂಟ್ಸ್ ( ತಬಲಾ) ವೈಯಕ್ತಿಕ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಮಲವಂತಿಗೆ ಗ್ರಾಮ ಪಂಚಾಯತ್ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಂಟ್ವಾಳದ ಲಕ್ಷ್ಮಣ್ ಎಚ್.ಕೆ ಪ್ರಥಮ ಸ್ಥಾನ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆಗಳು ಇದೇ ತಿಂಗಳ 23,24ಹಾಗೂ 25 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದ್ದು ಮಾನ್ಯ ಮುಖ್ಯಮಂತ್ರಿ ಗಳು ಉದ್ಘಾಟಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.