ಆರೋಗ್ಯ ಇಲಾಖೆ ವತಿಯಿಂದ ಸಜಿಪ ಮುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಾವರ, ನಂದಾವರ ಕೋಟೆ, ದಾಸರಗುಡ್ಡೆ ಪರಿಸರದಲ್ಲಿ ವಿಶೇಷ ಲಾರ್ವ ಸಮೀಕ್ಷೆಯನ್ನು ಶುಕ್ರವಾರ ಕೈಗೊಳ್ಳಲಾಯಿತು.
ಬಂಟ್ವಾಳ ತಾಲೂಕಿನ ಅರೋಗ್ಯಾಧಿಕಾರಿ ಡಾ, ಅಶೋಕ್ ಕುಮಾರ್ ರೈ, ಸಜಿಪನಡು ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತುಫೈಲ್, ಹಿರಿಯ ಅರೋಗ್ಯ ನಿರೀಕ್ಷಣಾಧಿಕಾರಿ ಕುಸುಮಾ, ಹಿರಿಯ ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿ ಇಂದಿರಾ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ಎಲ್ಲ ಪ್ರಾಥಮಿಕ ಅರೋಗ್ಯ ಕೇಂದ್ರದ ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿಗಳು, ಅರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಸಜಿಪನಡು ವ್ಯಾಪ್ತಿಯ ಎಲ್ಲಾ ಆಶಾ ಕಾರ್ಯಕರ್ತೆಯರು ಮಳೆಗಾಲ ಪ್ರಾರಂಭ ವಾಗುತ್ತಿರುವುದರಿಂದ ಮುಂಜಾಗ್ರತ ಕ್ರಮವಾಗಿ ಮನೆ ಮನೆ ಭೇಟಿ ನೀಡಿ ಡೆಂಘೆ ನಿಯಂತ್ರಣ, ಲಾರ್ವ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಸ್ವಚ್ಛತೆ ಬಗ್ಗೆ ವಿಶೇಷ ಮಾಹಿತಿ ನೀಡಿದರು.ಯಾವುದೇ ಜ್ವರ ಪ್ರಕರಣ ಕಂಡು ಬಂದರೆ ಹತ್ತಿರದ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳ ಬೇಕು ಎಂದವರು ತಿಳಿಸಿದರು