ಬಂಟ್ವಾಳ: ಬಿ.ಸಿ.ರೋಡಿನ ಕೊಡಂಗೆಯಲ್ಲಿರುವ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026 27ನೇ ಸಾಲಿನ ತಾಲೂಕು ಹಂತದ ದಾಖಲಾತಿ ಆಂದೋಲನ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆಯನ್ನು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ವಹಿಸಿ ಯೋಜನೆಯ ಕುರಿತು ಮಾಹಿತಿ ನೀಡಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಪೋಷಕ ಕ್ರಿಯಾಯೋಜನೆ ರೂಪಿಸಲು ರೂಪಿಸಲು ಮಾರ್ಗದರ್ಶನ ನೀಡಿದರು.
ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ವಿದ್ಯಾ, ಶಿಕ್ಷಣ ಸಂಯೋಜಕರಾದ ಪ್ರತಿಮಾ, ಸುಧಾ, ಸರ್ಕಾರಿ ಪ್ರೌಢಶಾಲೆ ಕೊಡಂಗೆ ಮುಖ್ಯ ಶಿಕ್ಷಕ ಸುಧೀರ್ ಜಿ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲಾ ಶಿಕ್ಷಕರು ಎಸ್ಡಿಎಂಸಿ ಸದಸ್ಯರು, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಪಾಲಕರು ಶಾಲಾ ಮಕ್ಕಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸುಗುಣ ಸ್ವಾಗತಿಸಿದರು.
ಈ ವೇಳೆ ಜಾಥ ನಡೆಸಿ ಸ್ಥಳೀಯ ಪರಿಸರದಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಮನವೊಲಿಸಲಾಯಿತು. ಪಿಎಂಸಿ ಸರ್ಕಾರಿ ಪ್ರಾಥಮಿಕ ಶಾಲೆ, ಕೊಡಂಗೆ ಇಲ್ಲಿಗೆ ವಿವಿಧ ತರಗತಿಗಳಿಗೆ ಈವರೆಗೆ 65 ಮಕ್ಕಳು ದಾಖಲಾಗಿದ್ದು ಉತ್ತಮ ಪ್ರಗತಿಯಾಗಿದೆ.