ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಂತೆ ಬಂಟ್ವಾಳ ತಾಲೂಕಿನ ಕೆಲ ಭಾಗಗಳಲ್ಲಿ ಎರಡು ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿದ್ದು, ಶನಿವಾರ ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆ ಸುರಿಯಿತು.
ಕಾವಳಪಡೂರು ಗ್ರಾಮದ ಮಧ್ವ ಬರ್ಕಟ್ಟ, ಎಂಬಲ್ಲಿ ಕವಿತ ಸೇಸಪ್ಪ ಪೂಜಾರಿ ಎಂಬುವರ ಮನೆಗೆ ಸಿಡಿಲು ಬಡಿದು, ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಪಾಯ ಇರುವುದಿಲ್ಲ.
ಕಡೇಶಿವಾಲಯ ಗ್ರಾಮದ ಅಣ್ಣು ಪೂಜಾರಿ ಮನೆಗೆ ಸಿಡಿಲು ಬಡಿದು ಮನೆಗೆ ಹಾನಿ ಆಗಿರುತ್ತದೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ. ಇಳಿಯೂರು ದೇವಸ್ಥಾನದಲ್ಲೂ ಸಿಡಿಲಿನ ಹೊಡೆತಕ್ಕೆ ಹಾನಿಯಾಗಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.