ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೆಲ್ಕಾರ್ ನಲ್ಲಿ ಸಂಚರಿಸುತ್ತಿದ್ದ ಲಾರಿಯೊಂದರಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡು ವಸ್ತುಗಳೆಲ್ಲವೂ ಭಸ್ಮಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಗುಜರಿ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯೊಳಗೆ ಸಮಸ್ಯೆ ಉಂಟಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಲಾರಿಯೊಳಗಿದ್ದ ಗುಜರಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.
ಕೂಡಲೇ ಬಂಟ್ವಾಳದ ಅಗ್ನಿಶಾಮಕದಳಕ್ಕೆ ಕರೆ ಹೋಗಿದ್ದು, ಅವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಗುಜಿರಿಯಲ್ಲಿದ್ದ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ಆಗಿರುವ ಸಾಧ್ಯತೆ ವ್ಯಕ್ತವಾಗಿದೆ.