ಬಂಟ್ವಾಳ ತಾಲೂಕಿನ ಕುರಿಯಾಳ ಎಂಬಲ್ಲಿ ಬಾವಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರನ್ನು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಪದ್ಮನಾಭ ಮತ್ತು ರಾಮ ಗಾಯಗೊಂಡವರು. ಭಾನುವಾರ ಸಂಜೆ ಈ ಘಟನೆ ನಡೆದಿದೆ.
ಬಾವಿ ಕೆಲಸಕ್ಕೆಂದು ಬರಿಮಾರು ನಿವಾಸಿಗಳಿಬ್ಬರು ಕುರಿಯಾಳ ಗ್ರಾಮದ ಕುಕ್ಕಾಜೆಯ ಕೇಶವ ಪೂಜಾರಿ ಎಂಬವರ ಮನೆಗೆ ಆಗಮಿಸಿದ್ದರು. ಕೆಲಸ ಮುಗಿಸಿ ಮೇಲಕ್ಕೆ ಹತ್ತುವ ವೇಳೆ ಜಾರಿ ಬಿದ್ದಿದ್ದಾರೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಬಳಿಕ ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ಇಬ್ಬರನ್ನೂ ಮೇಲಕ್ಕೆತ್ತುವಲ್ಲಿ ಸಫಲರಾದರು.