ಬಂಟ್ವಾಳ: ಇರವಿನ ಅರಿವು ಆತ್ಮ ಸಾಕ್ಷಾತ್ಕಾರಕ್ಕೆ ದಾರಿ ಎಂಬುದಾಗಿ ನಿವೃತ್ತ ಪ್ರಾಧ್ಯಾಪಕ ಶ್ರೀ ರಾಜಮಣಿ ರಾಮಕುಂಜ ಅವರು ಹೇಳಿದರು. ಅವರು ಕೈಕಂಬದ ಶಮ್ಯಾಪ್ರಾಸದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಂಕರ ತತ್ವ ಪ್ರಚಾರ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.
ಅಭಿಯಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಆತ್ಮ ವಿಕಸನ ಮಾಡಿಕೊಳ್ಳುವುದರ ಮೂಲಕ ನಾವೂ ಬ್ರಹ್ಮರಾಗಬಹುದು ಎಂದು ಹೇಳಿದರು.
VNR GOLD
ಪ್ರಾಂಶುಪಾಲೆ ರಮಾ ಎಸ್.ಭಂಡಾರಿ ಸಾಂದರ್ಭಿಕವಾಗಿ ಮಾತನಾಡಿದರು. ಜಗದೀಶ್ ಹೊಳ್ಳ ಕಾರ್ಯಕ್ರಮ ನಿರೂಪಿಸಿದರು. ಅಭಿಯಾನದ ಬಂಟ್ವಾಳ ತಾಲೂಕು ಸಮಿತಿ ಸಂಚಾಲಕ ಅನಾರು ಕೃಷ್ಣ ಶರ್ಮ ವಂದಿಸಿದರು. ಆರ್ಟ್ ಆಫ್ ಲಿವಿಂಗ್ ಸಮಿತಿಯ ವತಿಯಿಂದ ನಡೆದ ಭಜನಾ ಕಾರ್ಯಕ್ರಮದ ಮೂಲಕ ಕಾರ್ಯಕ್ರಮಕ್ಕೆ ಮಂಗಳ ಹಾಡಲಾಯಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶಾಂಕರ ತತ್ವ ಪ್ರಚಾರ ಅಭಿಯಾನ ಕಾರ್ಯಕ್ರಮ"
Be the first to comment on "ಶಾಂಕರ ತತ್ವ ಪ್ರಚಾರ ಅಭಿಯಾನ ಕಾರ್ಯಕ್ರಮ"