ಬಂಟ್ವಾಳ

ಮಕ್ಕಳಿಗೆ ದ್ವಿಚಕ್ರ ವಾಹನ ಕೊಟ್ಟ ಹಿರಿಯರಿಗೆ ತಲಾ 25 ಸಾವಿರ ರೂ ದಂಡ

ಮಕ್ಕಳಿಗೆ ದ್ವಿಚಕ್ರ ವಾಹನ ಕೊಟ್ಟ ಹಿರಿಯರಿಗೆ ತಲಾ 25 ಸಾವಿರ ರೂ ದಂಡ

ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಎರಡು ಪ್ರತ್ಯೇಕ ಪ್ರಕರಣಗಳು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು,. ವಾಹನಗಳ ಮಾಲೀಕರಿಗೆ ತಲಾ 25,000 ರೂ ದಂಡವನ್ನು ನ್ಯಾಯಾಲಯ.ವಿಧಿಸಿದೆ.

ಏಪ್ರಿಲ್ 6ರಂದು ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್‌ ನಲ್ಲಿ ದ್ವಿಚಕ್ರ ವಾಹನವನ್ನು ಹಾಗೂ ಏ.28ರಂದು ಬಿಸಿ ರೋಡ್‌ ನಲ್ಲಿ ದ್ವಿಚಕ್ರ ವಾಹನವನ್ನು  ಅಪ್ರಾಪ್ತ ಬಾಲಕರು ಚಾಲನೆ ಮಾಡಿರುವುದನ್ನು ಬಂಟ್ವಾಳ ಸಂಚಾರ ಠಾಣಾ ಪೊಲೀಸರು ವಾಹನ ತಪಾಸಣೆಯ ವೇಳೆ ಪತ್ತೆಹಚ್ಚಿದ್ದಾರೆ.

ಜಾಹೀರಾತು
VNR GOLD

ಈ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ನೀಡಿದ ವಾಹನಗಳ ಮಾಲಿಕರ ವಿರುದ್ದ ಬಂಟ್ವಾಳ ಸಂಚಾರ ಠಾಣಾ ಪೊಲೀಸರು ಎಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ದೋಷಾರೋಣ ಪತ್ರ ಸಲ್ಲಿಸಿದರು. ಎರಡೂ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಲಯವು ಎರಡೂ ವಾಹನಗಳ ಮಾಲೀಕರಿಗೆ ತಲಾ ರೂ.25,000 ದಂಡ ವಿಧಿಸಿ ಅದೇಶಿಸಿರುತ್ತದೆ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.