ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್‌ನ ೨೦೨೫-೨೬ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ. ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ. ವೈ ( ವಿಜಯ ಕರ್ನಾಟಕ), ಹರ್ಷ (ಡೆಕ್ಕನ್ ಹೆರಾಲ್ಡ್) , ರೇಮಂಡ್ ಡಿಕೂನಾ ( ಪಿಂಗಾರ) ಮತ್ತು ಆರ್.ಎಂ. ರಾಜೇಂದ್ರನ್ (ಕಲೈಂಜರ್ ಟಿ.ವಿ.) ಇವರು ಗೌರವ ಸನ್ಮಾನಕ್ಕೆ ಆಯ್ಕೆಯಾದವರು. ಗೌರವ ಪುರಸ್ಕಾರ 10 ಸಾವಿರ ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ. ಮೇ 24 ರಂದು ಬೆಳಗ್ಗೆ 11ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿರುವ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಂದು ಗೌರವ ಸನ್ಮಾನ ನೀಡಲಾಗುವುದೆಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆ"
Be the first to comment on "ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆ"