24ರಂದು ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ಬಂಟ್ವಾಳ ವಲಯ ರಜತ ಸಂಭ್ರಮ

ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ಬಂಟ್ವಾಳ ವಲಯದ ರಜತ ಸಂಭ್ರಮ ಕಾರ್ಯಕ್ರಮ, ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಕಾರ್ಯಕ್ರಮ ಮೇ 24ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ.

PRESS MEET

ಪೂರ್ವಾಧ್ಯಕ್ಷ ಹಾಗೂ ಗೌರವ ಸಲಹೆಗಾರ ಸುಧಾಕರ ಸಾಲ್ಯಾನ್ ಅವರು ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ವಿವರ ನೀಡಿದರು.

ಬೆಳಗ್ಗೆ 9.30ಕ್ಕೆ ಪದಗ್ರಹಣ ಸಮಾರಂಭವು ಆರಂಭವಾಗಲಿದ್ದು, ಸಂಜೆ 6ರಿಂದ ರಜತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಬಳಿಕ ಶಿವದೂತೆ ಗುಳಿಗೆ ಕಾರ್ಯಕ್ರಮ ರೋನಿ ಫೆರ್ನಾಂಡೀಸ್ ಪ್ರಾಯೋಜಕತ್ವದಲ್ಲಿ ನಡೆಯಲಿದೆ. ಸಂಜೆಯ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ನಿಯೋಜಿತ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ವಹಿಸಲಿದ್ದು, ಅತಿಥಿಗಳಾಗಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಯ್ಕ್ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವ ರಮಾನಾಥ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಪ್ರಮುಖರು ಭಾಗವಹಿಸುವರು. 160 ಸದಸ್ಯರು ಇರುವ ಸಂಘ ಕಳೆದ ಹದಿನೈದು ವರ್ಷಗಳಿಂದ ಆರೋಗ್ಯ ತಪಾಸಣೆ, ರಕ್ತದಾನ, ವನಮಹೋತ್ಸವ ಸಹಿತ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದ್ದು, ಪ್ರತಿ  ವರ್ಷ ಸದಸ್ಯರ ಹಾಗೂ ಇತರರ ಮನವಿ ಮೇರೆಗೆ ಧನಸಹಾಯ ನೀಡಲಾಗುತ್ತಿದೆ. ಪ್ರತಿಭಾನ್ವಿತ ಬಡವಿದ್ಯಾರ್ಥಿಗಳಿಗೆ ನೆರವು, ಸಾಧಕರ ಸನ್ಮಾನ ಮಾಡಲಾಗುತ್ತಿದೆ. ಪ್ರತಿ ವಾರ ಪಿಗ್ಮಿ ಯೋಜನೆಯಲ್ಲಿ ಹಣ ತೊಡಗಿಸಿ, ಸಂಘದ ಆರ್ಥಿಕತೆ ಗಟ್ಟಿಗೊಳಿಸಲಾಗುತ್ತಿದ್ದು, ಈಗಾಗಲೇ ಬಿ.ಸಿ.ರೋಡಿನಲ್ಲಿ ಜಾಗ ಖರೀದಿಸಿ, ಸಮುದಾಯ ಭವನ ನಿರ್ಮಾಣಕ್ಕೆ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಸುಧೀರ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಲಾಲ್, ಗೌರವ ಸಲಹೆಗಾರರಾದ ವಿಶ್ವನಾಥ ಬಿ, ಸಂಘಟನಾ ಸಂಚಾಲಕ ಗಣೇಶ್ ಸುವರ್ಣ ತುಂಬೆ , ಕೋಶಾಧಿಕಾರಿ ಭಾಸ್ಕರ ಕುಲಾಲ್, ನಿಕಟಪೂರ್ವಾಧ್ಯಕ್ಷ ಜಗದೀಶ್ ರೈ, ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.

VNR GOLD

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "24ರಂದು ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ಬಂಟ್ವಾಳ ವಲಯ ರಜತ ಸಂಭ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*