ಬಂಟ್ವಾಳ

ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ತಾಲೂಕು ಘಟಕ ತೃತೀಯ ವಾರ್ಷಿಕೋತ್ಸವ, ಸನ್ಮಾನ ಕಾರ್ಯಕ್ರಮ – Details

ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ತಾಲೂಕು ಘಟಕದ ತೃತೀಯ ವಾರ್ಷಿಕೋತ್ಸವ, ಯಕ್ಷಗಾನ ಬಯಲಾಟ ಹಾಗೂ ಸನ್ಮಾನ ಕಾರ್ಯಕ್ರಮ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಬಳಿ ಬುಧವಾರ ಸಂಜೆ ನಡೆಯಿತು.

BCROAD

ಈ ಸಂದರ್ಭ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಮತ್ತು ಹಿರಿಯ ದೈವನರ್ತಕರೂ ಕಲಾಪೋಷಕರೂ ಶ್ರೀ ಕ್ಷೇತ್ರ ಬಾಚಕೆರೆಯ ಧರ್ಮದರ್ಶಿಗಳೂ ಆಗಿರುವ ದೇಜಪ್ಪ ಬಾಚಕೆರೆ ಅವರನ್ನು ಸನ್ಮಾನಿಸಲಾಯಿತು.

VNR GOLD

ಕಲೆಯನ್ನು ಪೋಷಿಸುತ್ತಿರುವ ಅಭಿಮಾನಿಗಳು, ಪ್ರೇಕ್ಷಕರು ಇರುವವರೆಗೆ ಕಲಾವಿದರು ಇರುತ್ತಾರೆ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ಸಮಸ್ಯೆಗಳನ್ನು ಗುರುತಿಸಿ ಅವರಿಗೆ ನೆರವು ನೀಡುವ ಕಾರ್ಯವನ್ನು ಮಾಡುತ್ತಿದೆ ಎಂದು ಈ ಸಂದರ್ಭ ಸರಪಾಡಿ ಅಶೋಕ ಶೆಟ್ಟಿ ಹೇಳಿದರು.

ಜಾಹೀರಾತು

ಬಂಟ್ವಾಳ ಘಟಕದ ಅಧ್ಯಕ್ಷ ದಿವಾಕರ ಶೆಟ್ಟಿ ಪರಾರಿಗುತ್ತು ಅಧ್ಯಕ್ಷತೆ ವಹಿಸಿದ್ದರು..ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಈ ಸಂದರ್ಭ ಮಾತನಾಡಿ ಮೇ 30ರಂದು ನಡೆಯುವ ಪಟ್ಲ ಸಂಭ್ರಮದ ಕುರಿತು ಮಾಹಿತಿಯನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಅಗ್ರಜ ಬಿಲ್ಡರ್ಸ್ ಮಾಲೀಕರಾದ ಸಂದೇಶ್ ಶೆಟ್ಟಿ ಅರೆಬೆಟ್ಟು, ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಹಾಗೂ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕ ಸಂಚಾಲಕ ಭುವನೇಶ್ ಪಚ್ಚಿನಡ್ಕ, ಗೌರವಾಧ್ಯಕ್ಷ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ನ್ಯಾಯವಾದಿ ಶ್ರೀಧರ ಶೆಟ್ಟಿ ಪುಳಿಂಚ, ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಮತ್ತು ಘಟಕದ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು. ಬಂಟ್ವಾಳ ಘಟಕದ ಅಧ್ಯಕ್ಷರಾದ ದಿವಾಕರ ಶೆಟ್ಟಿ ಪರಾರಿಗುತ್ತು ಸ್ವಾಗತಿಸಿದರು. ಬಿ. ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬೊಂಡಾಲ ಚಿತ್ತರಂಜನ ಶೆಟ್ಟಿ ಮತ್ತು ಸತೀಶ್ ಶೆಟ್ಟಿ ಮೊಡಂಕಾಪು ಅವರು ಸನ್ಮಾನಪತ್ರ ವಾಚಿಸಿದರು. ಪಾವಂಜೆ ಮೇಳದವರಿಂದ ಛಾಯಾನಂದನ ಯಕ್ಷಗಾನ ಬಯಲಾಟ ಜರುಗಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.