ಬಂಟ್ವಾಳ

ಮೇ 31ರಂದು ಬಂಟ್ವಾಳ ತಾಲೂಕು ಕುಲಾಲ ಸಂಘದ ಮಹಾಸಭೆ, ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ, ಸಂಜೆ ಯಕ್ಷಗಾನ ವೈಭವ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ೪೬ನೇ ವಾರ್ಷಿಕ ಮಹಾಸಭೆ ಮೇ ೩೧ರಂದು ಬೆಳಿಗ್ಗೆ ೧೧ಕ್ಕೆ ನಡೆಯಲಿದೆ. ಸಂಘದ ಅಧ್ಯಕ್ಷ ಬಿ. ರಮೇಶ್ ಸಾಲಿಯಾನ್ ಸಂಚಯಗಿರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ ನಡೆಯುವ ವಾರ್ಷಿಕೋತ್ಸವ ಸಭಾ ಕಾರ್ಯಕ್ರಮವನ್ನು ಅಖಿಲ ಭಾರತ ಗ್ರಾಹಕರ ಕಲ್ಯಾಣ ಪರಿಷತ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ. ಎಂ. ಪಿ. ವರ್ಷ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಯೂರ್ ಉಳ್ಳಾಲ್, ಪುಂಡರೀಕಾಕ್ಷ ಯು., ಡಿ. ಚಂದಪ್ಪ ಮೂಲ್ಯ, ಸೋಮಯ್ಯ ಹನೈನಡೆ, ಸುಮಿತ್ ಸೊರ್ನಾಡು, ವಸಂತಿ ಭೋಜ ಸಾಲಿಯಾನ್ ಹಾಗೂ ಸುರೇಶ್ ಕುಮಾರ್ ನಾವೂರ ಭಾಗವಹಿಸಲಿದ್ದಾರೆ.

ಸಾಧಕರಿಗೆ ಗೌರವ

ಜಾಹೀರಾತು

ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ೪ನೇ ರ್‍ಯಾಂಕ್ ಪಡೆದ ಜ್ಞಾನಶ್ರೀ ಅರಳ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ೪ನೇ ರ್‍ಯಾಂಕ್ ಪಡೆದ ಮನ್ವಿತಾ, ರಾಷ್ಟ್ರಮಟ್ಟದ ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ೧೦ನೇ ಸ್ಥಾನ ಪಡೆದ ಕೃತಿ ಎನ್.ಬಿ.ಪಿ. ಹಾಗೂ ಕರಾಟೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಸಾನ್ವಿ ಕೆ. ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಸಹಕಾರಿ ಇಲಾಖೆಯಲ್ಲಿ ಸ್ವಯಂ ನಿವೃತ್ತ ಪ್ರಥಮ ದರ್ಜೆ ಸಹಾಯಕರಾದ ಜಲಜಾಕ್ಷಿ ಕುಲಾಲ್ ಅವರಿಗೆ “ಕುಲಾಲ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಬೆಳಿಗ್ಗೆ ಪ್ರೇಮನಾಥ ನೇರಂಬೋಳು, ಕೃತಿಕ್ ಕುಮಾರ್ ವೈ.ಎಸ್. ಹಾಗೂ ವೈಷ್ಣವಿ ವೈ.ಕೆ. ಇವರಿಂದ ಗಾನ ಸಂಭ್ರಮ ಮತ್ತು ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿವಿಧ ವಿಭಾಗದಲ್ಲಿ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.

ಸಂಜೆ ಅಶ್ವಥ್ ಕುಲಾಲ್ ಮಂಜನಾಡಿ ನೇತೃತ್ವದಲ್ಲಿ ಕುಲಾಲ ಸಮಾಜ ಬಾಂಧವರಿಂದ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಯಾದವ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts