ಜಿಲ್ಲಾ ಸುದ್ದಿ

5 ವರ್ಷದೊಳಗಿನ ಮಕ್ಕಳಿಗೆ ಪೊಲಿಯೋ ಲಸಿಕೆ ಕಡ್ಡಾಯ

 ಜೂನ್ 28 ರಿಂದ  ಜುಲೈ  1 ರವರೆಗೆ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮವು ನಡೆಯಲಿರುವುದರಿಂದ ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಲು ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮನೆಯಲ್ಲಿರುವ ನವಜಾತ ಶಿಶುಗಳನ್ನು ಗುರುತಿಸಿ ಅಂತಹ ಮಕ್ಕಳಿಗೆ ಕಡ್ಡಾಯವಾಗಿ ಪೊಲಿಯೋ ಲಸಿಕೆಯನ್ನು ನೀಡಬೇಕು. ತಾಯಂದಿರ ಸಭೆಗಳಲ್ಲಿ ಲಸಿಕಾ ಕಾರ್ಯಕ್ರಮದ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.

ಜಾಹೀರಾತು

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಲಸಿಕಾ ದಿನ ಮತ್ತು ಸ್ಥಳಗಳ ಮಾಹಿತಿಯನ್ನು ಪ್ರಚಾರ ಮಾಡಬೇಕು.  ಎಲ್ಲಾ ಶಾಲೆಗಳು ಪಲ್ಸ್ ಪೊಲಿಯೊ ಕಾರ್ಯಕ್ರಮದ ಬಗ್ಗೆ ಮುಂಚಿತವಾಗಿ  ಜಾಥಾ ಮಾಡಿ ಜನರಲ್ಲಿ ಜಾಗೃತಿ ಮೂಡಿಸಬೇಕು.  ಎಂದರು.

ಕಾರ್ಯಕ್ರಮದ ಮೊದಲನೇ ದಿನ ಪೊಲಿಯೋ ಬೂತ್‍ಗಳಲ್ಲಿ ಹಾಗೂ 2 ದಿನ ಗ್ರಾಮಾಂತರ ಮತ್ತು 3 ದಿನ ನಗರ ಪ್ರದೇಶಗಳಲ್ಲಿ ಮನೆಮನೆ ಭೇಟಿಯ ಮೂಲಕ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೊಲಿಯೋ ಲಸಿಕೆ ನೀಡುವಂತೆ ವ್ಯವಸ್ಥೆ ಮಾಡಲಾಗಿದೆ. ಈ ವರ್ಷ  1,40,247 ಮಕ್ಕಳಿಗೆ ಲಸಿಕೆ ನೀಡಲು ಗುರಿ ನಿಗದಿಪಡಿಸಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಆರ್.ಸಿ.ಹೆಚ್ ಅಧಿಕಾರಿ ಡಾ.ರಾಜೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ  ಡಾ.ನವೀನ್ ಕುಲಾಲ್, ಎಸ್.ಎಂ.ಒ ಡಾ.ಹರ್ಷಿತ್, ಮೆಡಿಕಲ್ ಕಾಲೇಜು  ಹಾಗೂ ನರ್ಸಿಂಗ್ ಕಾಲೇಜು ಮುಖ್ಯಸ್ಥರು, ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು

VNR GOLD
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts