ಪ್ರಮುಖ ಸುದ್ದಿಗಳು

ವಿಶ್ವ ಪರಿಸರ ದಿನಾಚರಣೆ:  Reels competetion – ವಿವರಗಳು ಹೀಗಿವೆ


ವಿಶ್ವ ಪರಿಸರ ದಿನಾಚರಣೆ-2026 ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ  ಮಂಗಳೂರಿನ ಪ್ರಾದೇಶಿಕ ಕಚೇರಿಯು ಪರಿಸರ ಜಾಗೃತಿ ಹಾಗೂ ಹವಾಮಾನ ಕ್ರಮಗಳಿಗೆ ಸಾರ್ವಜನಿಕರ  ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ವಿಶೇಷ ರೀಲ್ಸ್ ಸ್ಪರ್ಧೆಯನ್ನು ಘೋಷಿಸಿದೆ.  “ಪ್ರಕೃತಿಯಿಂದ ಪ್ರೇರಿತ, ಹವಾಮಾನಕ್ಕಾಗಿ; ನಮ್ಮ ಭವಿಷ್ಯಕ್ಕಾಗಿ” ಎಂಬ ಧೈಯವಾಕ್ಯದಡಿ ನಡೆಯಲಿರುವ ಈ ಸ್ಪರ್ಧೆಯ ಮೂಲಕ ಪರಿಸರ ಸಂರಕ್ಷಣೆ, ಸುಸ್ಥಿರ ಜೀವನಶೈಲಿ, ಹವಾಮಾನ ಬದಲಾವಣೆಯ ಬಗ್ಗೆ ಅರಿವು ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಗಳಿಗೆ ಮುಕ್ತವಾಗಿರುವ ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಸೃಜನಶೀಲತೆಯನ್ನು ಬಳಸಿಕೊಂಡು 30 ರಿಂದ 120 ಸೆಕೆಂಡುಗಳ ಅವಧಿಯ ಮೂಲ ರೀಲ್ಸ್ ವೀಡಿಯೊಗಳನ್ನು ಸಿದ್ಧಪಡಿಸಿ ಸಲ್ಲಿಸಬೇಕು. ಸಲ್ಲಿಕೆಯಾಗುವ ವಿಡಿಯೊಗಳು ಸ್ಪರ್ಧೆಯ ಅಧಿಕೃತ ವಿಷಯ ವಸ್ತುವಿಗೆ ಹೊಂದಿಕೆಯಾಗಿರಬೇಕು. ಅಸಭ್ಯ, ಆಕ್ರಮಣಕಾರಿ, ಮಾನಹಾನಿಕಾರಕ ಅಥವಾ ಧಾರ್ಮಿಕವಾಗಿ ಸೂಕ್ಷ್ಮ ವಿಷಯಗಳನ್ನು ಒಳಗೊಂಡಿರಬಾರದು ಎಂದು ಮಂಡಳಿ ಸ್ಪಷ್ಟಪಡಿಸಿದೆ.

VNR GOLD

ಸ್ಪರ್ಧೆಯಲ್ಲಿ ವಿಜೇತರಿಗಾಗಿ ಆಕರ್ಷಕ ನಗದು ಬಹುಮಾನಗಳನ್ನು ಘೋಷಿಸಲಾಗಿದ್ದು, ಪ್ರಥಮ ಬಹುಮಾನ 10 ಸಾವಿರ ರೂ., ದ್ವಿತೀಯ ಬಹುಮಾನ 5  ಸಾವಿರ ರೂ. ಹಾಗೂ ತೃತೀಯ ಬಹುಮಾನ 3 ಸಾವಿರ ರೂ. ನೀಡಲಾಗುತ್ತದೆ.

ಜಾಹೀರಾತು

ಭಾಗವಹಿಸಲು ಆಸಕ್ತರು ತಾವು ಸಿದ್ಧಪಡಿಸಿದ ರೀಲ್ಸ್‍ಗಳನ್ನು ಇನ್‍ಸ್ಟಾಗ್ರಾಂ ಅಥವಾ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ರೂಪದಲ್ಲೇ ಅಪ್‍ಲೋಡ್ ಮಾಡಬೇಕು. ಸ್ಪರ್ಧೆಯ ಅವಧಿಯಲ್ಲಿ ಖಾತೆಯನ್ನು ಸಾರ್ವಜನಿಕ  ಸ್ಥಿತಿಯಲ್ಲಿ ಇರಿಸಬೇಕು. ಬಳಿಕ ಹೆಸರು, ವಯಸ್ಸು, ಸಂಪರ್ಕ ಸಂಖ್ಯೆ ಹಾಗೂ ಸ್ಥಳದ ವಿವರಗಳೊಂದಿಗೆ ರೀಲ್ಸ್ ಲಿಂಕ್ ಅನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 9741632289 ಸಂಖ್ಯೆಗೆ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದು. ಜೂನ್ 2 ರೀಲ್ಸ್ ಸಲ್ಲಿಕೆಗೆ ಕೊನೆಯ ದಿನ.

 ಡಿಜಿಟಲ್ ವೇದಿಕೆಗಳ ಮೂಲಕ, ವಿಶೇಷವಾಗಿ ಯುವಜನರ ಪಾಲ್ಗೊಳ್ಳುವಿಕೆಯಿಂದ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಮಾಜದ ವಿವಿಧ ವರ್ಗಗಳಿಗೆ ತಲುಪಿಸಿ, ಹಸಿರು ಭವಿಷ್ಯ ನಿರ್ಮಾಣದತ್ತ ಸಮೂಹ ಪ್ರಯತ್ನಕ್ಕೆ ಉತ್ತೇಜನ ನೀಡುವುದು ಈ ಸ್ಪರ್ಧೆಯ ಪ್ರಮುಖ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಕಚೇರಿ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts