ಜೂ. 6-7: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ‘ಹಲಸುಮೇಳ- ಆಹಾರೋತ್ಸವ’

ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಜೂ.6 ಮತ್ತು 7 ರಂದು ಎರಡು ದಿನ ಹಲಸುಮೇಳ- ಆಹಾರೋತ್ಸವ ಆಯೋಜಿಸಲಾಗಿದೆ.

ಹಲಸು, ಮಾವು ಹಾಗೂ ತಾಜಾ ತರಕಾರಿಗಳು ಲಭ್ಯವಿರುತ್ತವೆ. ಕೇವಲ ಹಲಸು ಮಾತ್ರವಲ್ಲದೆ, ಮಾವಿನ ಹಣ್ಣಿನ ಪ್ರಿಯರಿಗಾಗಿ ಮಲ್ಲಿಕಾ, ಅಲ್ಫೋನ್ಸ್, ದಶ್ಹೇರಿ ಸೇರಿದಂತೆ ವಿವಿಧ ತಳಿಯ ಉತ್ಕೃಷ್ಟ ಗುಣಮಟ್ಟದ ಮಾವಿನಹಣ್ಣುಗಳು ಲಭ್ಯವಿರಲಿವೆ. ಗ್ರಾಹಕರಿಗೆ ನೇರವಾಗಿ ತಲುಪಿಸುವ ನಿಟ್ಟಿನಲ್ಲಿ ಮಲೆನಾಡಿನ ತಾಜಾ ತರಕಾರಿಗಳ ವಿಶೇಷ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಸ್ಥಳದಲ್ಲೇ ಬಿಸಿಬಿಸಿ ಆಹಾರ ತಯಾರಿ: ತೆಂಗಿನೆಣ್ಣೆಯ ವಿಶೇಷತೆ

ಜಾಹೀರಾತು

ಆಹಾರ ಪ್ರಿಯರಿಗಾಗಿ ಮೇಳದ ಆವರಣದಲ್ಲೇ ಬಿಸಿಬಿಸಿಯಾದ ಹಲಸಿನಕಾಯಿ ದೋಸೆ, ಬೋಂಡಾ, ಪೋಡಿ, ಉಪ್ಪುಸೊಳೆ ರೊಟ್ಟಿ, ಗುಳಿ ಅಪ್ಪ, ರಸಾಯನ, ಗುಜ್ಜೆ ಮಂಚೂರಿ, ಹಲಸಿನಹಣ್ಣಿನ ಪಾಯಸ, ಬೆರಟಿ ಪಾಯಸ,   ಹಾಗೂ ಹಲಸಿನ ಹಣ್ಣಿನ ಜಿಲೇಬಿ ಸೇರಿದಂತೆ ಹತ್ತಾರು ಬಗೆಯ ತಿಂಡಿ-ತಿನಿಸುಗಳನ್ನು ಸ್ಥಳದಲ್ಲೇ ಸಿದ್ಧಪಡಿಸಿ ನೀಡಲಾಗುತ್ತದೆ. ಸಾರ್ವಜನಿಕರ ಆರೋಗ್ಯ ಮತ್ತು ಸಾಂಪ್ರದಾಯಿಕ ರುಚಿಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ, ಎಲ್ಲಾ ಆಹಾರ ಪದಾರ್ಥಗಳ ತಯಾರಿಕೆಗೆ ಕೇವಲ ತೆಂಗಿನೆಣ್ಣೆಯನ್ನು ಮಾತ್ರ ಬಳಸುತ್ತಿರುವುದು ಆಹಾರೋತ್ಸವದ ಪ್ರಮುಖ ವಿಶೇಷತೆಯಾಗಿದೆ. ಅಲ್ಲದೇ ಹಪ್ಪಳ, ಸೋಂಟೆ, ಉಂಡ್ಳಕಾಳು, ಚಿಪ್ಸ್, ಬಾಳೆಹಣ್ಣು ಹಲ್ವ, ಹಲಸಿನಹಣ್ಣಿನ ಹಲ್ವ ಕೂಡಾ ಲಭ್ಯವಿದೆ. ಗುಣಮಟ್ಟಕ್ಕೆ ಇಲ್ಲಿ ಮೊದಲ ಆದ್ಯತೆ ನೀಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಾಂಸ್ಕೃತಿಕ ವೈಭವ

ಆಹಾರ ಮತ್ತು ಕೃಷಿ ಮೇಳಕ್ಕೆ ಪೂರಕವಾಗಿ ಎರಡು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯ ಆವರಣದಲ್ಲಿ ಈ ಸಾಂಸ್ಕೃತಿಕ ಸೌರಭ ಅನಾವರಣಗೊಳ್ಳಲಿದ್ದು, ಕಲಾಭಿಮಾನಿಗಳಿಗೆ ರಸದೌತಣ ನೀಡಲಿದೆ

VNR GOLD

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಜೂ. 6-7: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ‘ಹಲಸುಮೇಳ- ಆಹಾರೋತ್ಸವ’"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*