ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆಗಾಲದ ಮುನ್ನೆಚ್ಚರಿಕೆಯ ಪೂರ್ವತಯಾರಿ ಕುರಿತು ವೀರಕಂಭ ಗ್ರಾಮದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಬಂಟ್ವಾಳ ತಾಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ವೀರಕಂಭ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ದಿನೇಶ್ ಅವರ ಅಧ್ಯಕ್ಷತೆಯಲ್ಲಿ ವೀರಕಂಭ ಗ್ರಾಮ ಪಂಚಾಯಿತಿಯಲ್ಲಿ ನಡೆಯಿತು.
ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಲ್ಲುಕೋರೆಗಳ ಹೊಂಡಗಳು, ಕೆರೆಗಳು, ಕಾಲುಸಂಕಗಳ ಕುರಿತಾಗಿ ಮಳೆಗಾಲ ಪೂರ್ವದಲ್ಲಿ ಅನುಸರಿಸಬೇಕಾದ ಮುನ್ನಚ್ಚರಿಕೆ ಕ್ರಮಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ಕಸಸಂಗ್ರಹಣೆ ಸಮಸ್ಯೆ, ಸವಾಲುಗಳು, ಕಾರ್ಯವಿಧಾನಗಳ ಕುರಿತು ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಇಬ್ಬರು ಕ್ಷಯ ರೋಗ ಬಾಧಿತರಿಗೆ ಗ್ರಾಮ ಪಂಚಾಯತ್ ವತಿಯಿಂದ ಪೌಷ್ಟಿಕ ಆಹಾರ ಸಾಮಗ್ರಿ ಕಿಟ್ ಗಳನ್ನು ವಿತರಿಸಲಾಯಿತು. ಮಹಾತ್ಮಾ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಕ್ರಿಯವಲ್ಲದ ಉದ್ಯೋಗ ಚೀಟಿಗಳ ಪರಿಶೀಲನೆ ಮತ್ತು ರದ್ದುಪಡಿಸುವ ಬಗ್ಗೆ ನಿರ್ಣಯಿಸಲಾಯಿತು.
ವೀರಕಂಭ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ ಶರ್ಮಾ, ಅಂಗನವಾಡಿ ಮೇಲ್ವಿಚಾರಕಿ ರೂಪಕಲಾ ,ಗ್ರಾಮ ಅರೋಗ್ಯ ಸುರಕ್ಷಣಾಧಿಕಾರಿ ಇಲಾಖೆ ಜ್ಯೋತಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ನೇಹ ಸಂಜೀವಿನಿ ಮಹಿಳಾ ಒಕ್ಕೂಟ ದ ಪದಾಧಿಕಾರಿಗಳು, ಟಾಸ್ಕ್ ಫೋರ್ಸ್ ಸಮಿತಿ ಯ ಸದಸ್ಯರು, ಪಂಚಾಯತ್ ಕಾರ್ಯದರ್ಶಿ ಸವಿತಾ, ಲೆಕ್ಕ ಸಹಾಯಕ ನವೀನ್ ರಾಬರ್ಟ್, ಪಂಚಾಯತ್ ಸಿಬ್ಬಂದಿ ಹಾಜರಿದ್ದರು.