ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

2025-2026 ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಅಂಕ ಪಡೆದ ಸಂಘದ ವ್ಯಾಪ್ತಿಯ ಸದಸ್ಯರ ಮಕ್ಕಳನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.

ಸಂಘದ ಸದಸ್ಯ ಡೊಂಬಯ ಡಿ ಅರಳ ಅವರ ಮಗಳು ಜ್ಞಾನಶ್ರೀ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ 2025-26 ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600 ರಲ್ಲಿ 596 ಅಂಕ ಪಡೆದು ರಾಜ್ಯ ಮಟ್ಟದ ನಾಲ್ಕನೇ ಸ್ಥಾನ, ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಮೂರನೇ ಸ್ಥಾನ ಪಡೆದಿದ್ದಾರೆ. ಸದಸ್ಯ ನವೀನ ಶೆಟ್ಟಿ ಕರಿಂಕಿಜೆ ಅವರ ಮಗಳು ಕೃತ್ವಿ ಎನ್. ಶೆಟ್ಟಿ ರೋಟರಿ ಪದವಿ ಪೂರ್ವ ಕಾಲೇಜುನಲ್ಲಿ ಪಿಯುಸಿ ಯಲ್ಲಿ 600 ರಲ್ಲಿ 590 ಅಂಕಗಳೊಂದಿಗೆ ರಾಜ್ಯದಲ್ಲಿ ಹತ್ತನೇ ಸ್ಥಾನ, ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದು ಇಬ್ಬರಿಗೂ ಸಂಘದ  ಆಡಳಿತ ಮಂಡಳಿಯಿಂದ ಅಭಿನಂದಿಸಲಾಯಿತು.

ಅಭಿನಂದಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸಿದ್ದಕಟ್ಟೆ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಬರುವ ಸಂಘದ ಸದಸ್ಯರ ಮಕ್ಕಳು ಮಾಡಿದ ಶೈಕ್ಷಣಿಕ ಸಾಧನೆಯು ನಮ್ಮ ಸಂಘಕ್ಕೂ ಹೆಮ್ಮೆಯ ವಿಚಾರವಾಗಿದೆ. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿಯೂ ಇದೇ ರೀತಿಯ ಪ್ರಗತಿಯೊಂದಿಗೆ ಸಾಧನೆಯನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಜಾಹೀರಾತು

ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ, ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಜಾರಪ್ಪ ನಾಯ್ಕ, ವೀರಪ್ಪ ಪರವ, ಎ ಶಿವ ಗೌಡ ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಪೋಷಕರಾದ ನವೀನ ಶೆಟ್ಟಿ ಉಪಸ್ಥಿತರಿದ್ದರು.ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*