2025-2026 ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಅಂಕ ಪಡೆದ ಸಂಘದ ವ್ಯಾಪ್ತಿಯ ಸದಸ್ಯರ ಮಕ್ಕಳನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.
ಸಂಘದ ಸದಸ್ಯ ಡೊಂಬಯ ಡಿ ಅರಳ ಅವರ ಮಗಳು ಜ್ಞಾನಶ್ರೀ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ 2025-26 ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600 ರಲ್ಲಿ 596 ಅಂಕ ಪಡೆದು ರಾಜ್ಯ ಮಟ್ಟದ ನಾಲ್ಕನೇ ಸ್ಥಾನ, ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಮೂರನೇ ಸ್ಥಾನ ಪಡೆದಿದ್ದಾರೆ. ಸದಸ್ಯ ನವೀನ ಶೆಟ್ಟಿ ಕರಿಂಕಿಜೆ ಅವರ ಮಗಳು ಕೃತ್ವಿ ಎನ್. ಶೆಟ್ಟಿ ರೋಟರಿ ಪದವಿ ಪೂರ್ವ ಕಾಲೇಜುನಲ್ಲಿ ಪಿಯುಸಿ ಯಲ್ಲಿ 600 ರಲ್ಲಿ 590 ಅಂಕಗಳೊಂದಿಗೆ ರಾಜ್ಯದಲ್ಲಿ ಹತ್ತನೇ ಸ್ಥಾನ, ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದು ಇಬ್ಬರಿಗೂ ಸಂಘದ ಆಡಳಿತ ಮಂಡಳಿಯಿಂದ ಅಭಿನಂದಿಸಲಾಯಿತು.
ಅಭಿನಂದಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸಿದ್ದಕಟ್ಟೆ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಬರುವ ಸಂಘದ ಸದಸ್ಯರ ಮಕ್ಕಳು ಮಾಡಿದ ಶೈಕ್ಷಣಿಕ ಸಾಧನೆಯು ನಮ್ಮ ಸಂಘಕ್ಕೂ ಹೆಮ್ಮೆಯ ವಿಚಾರವಾಗಿದೆ. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿಯೂ ಇದೇ ರೀತಿಯ ಪ್ರಗತಿಯೊಂದಿಗೆ ಸಾಧನೆಯನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.
ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ, ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಜಾರಪ್ಪ ನಾಯ್ಕ, ವೀರಪ್ಪ ಪರವ, ಎ ಶಿವ ಗೌಡ ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಪೋಷಕರಾದ ನವೀನ ಶೆಟ್ಟಿ ಉಪಸ್ಥಿತರಿದ್ದರು.ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…