ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ವಾರ್ಷಿಕ ಮಹಾಸಭೆ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ 46ನೇ ವಾರ್ಷಿಕ ಮಹಾಸಭೆಯು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ಅಧ್ಯಕ್ಷ ಬಿ. ರಮೇಶ್ ಸಾಲಿಯಾನ್ ಸಂಚಯಗಿರಿಯವರ ಅಧ್ಯಕ್ಷತೆಯಲ್ಲಿ ಆದಿತ್ಯವಾರ ಬೆಳಿಗ್ಗೆ ನಡೆಯಿತು.

ಮಧ್ಯಾಹ್ನ ನಂತರ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ಗ್ರಾಹಕರ ಕಲ್ಯಾಣ ಪರಿಷತ್‌ನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ. ಎಂ. ಪಿ. ವರ್ಷ ಮೈಸೂರು, ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಮುಡಿಪು ಕುಲಾಲ ಸಂಘದ ಅಧ್ಯಕ್ಷ ಪುಂಡರೀಕಾಕ್ಷ ಯು., ನಿವೃತ್ತ ಡೆಪ್ಯೂಟಿ ಬಿಎಸ್‌ಎಫ್ ಕಮಾಂಡೆಂಟ್ ಡಿ. ಚಂದಪ್ಪ ಮೂಲ್ಯ, ಕುಲಾಲ ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಯ್ಯ ಹನೈನಡೆ, ಬಂಟ್ವಾಳ ಕುಲಾಲ ಯುವವೇದಿಕೆ ಅಧ್ಯಕ್ಷ ಸುಮಿತ್ ಸೊರ್ನಾಡು, ಕರ್ನಾಟಕ ರಾಜ್ಯ ಕರಾವಳಿ ಕುಲಾಲ ಕುಂಬಾರರ ಮಹಿಳಾ ಸಂಘದ ಅಧ್ಯಕ್ಷೆ ವಸಂತಿ ಭೋಜ ಸಾಲಿಯಾನ್ ಆಗಮಿಸಿದ್ದರು. ಮಹಿಳಾ ಘಟಕದ ಅಧ್ಯಕ್ಷೆ ಆಶಾಗಿರಿಧರ್, ಸೇವಾದಳಪತಿ ಜಯಂತ ಕುಲಾಲ್ ಅಗ್ರಬೈಲು ಉಪಸ್ಥಿತರಿದ್ದರು.

ಸಾಧಕರಿಗೆ ಗೌರವ ; ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ೪ನೇ ರ್‍ಯಾಂಕ್ ಪಡೆದ ಕು| ಜ್ಞಾನಶ್ರೀ ಅರಳ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ೪ನೇ ರ್‍ಯಾಂಕ್ ತಂದ ಕು| ಮನ್ವಿತಾ, ಬಾಲಕಿಯರ ಡಿಸ್ಕಸ್ ತ್ರೋ ಆಟದಲ್ಲಿ ರಾಷ್ಟ್ರಮಟ್ಟದಲ್ಲಿ ೧೦ನೇ ಸ್ಥಾನ ಪಡೆದ ಕು| ಕೃತಿ ಎನ್.ಬಿ.ಪಿ., ಕರಾಟೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕು| ಸಾನ್ವಿ ಕೆ.ರವರನ್ನು ಸನ್ಮಾನಿಸಲಾಯಿತು. ಡಾಕ್ಟರೇಟ್ ಪದವೀಧರೆ ಡಾ| ಬಬಿತಾಗಣೇಶ್, ಚಿತ್ರಕಲಾ ಕಲಾವಿದೆ ಸುಕನ್ಯಾ ಸೌತೆಬಳ್ಳಿ, ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯಮಟ್ಟದಲ್ಲಿ ೪ನೇ ಸ್ಥಾನ ಪಡೆದ ಸುಶ್ಮಿತಾ ಸೋಮನಾಥ್‌ರವರನ್ನು ಗೌರವಿಸಲಾಯಿತು. ಸಹಕಾರಿ ಇಲಾಖೆಯಲ್ಲಿ ಸ್ವಯಂನಿವೃತ್ತಿ ಪ್ರಥಮ ದರ್ಜೆ ಸಹಾಯಕರಾದ ಜಲಜಾಕ್ಷಿ ಕುಲಾಲ್ ಪಾಣೆಮಂಗಳೂರುರವರಿಗೆ ಅಮೂಲ್ಯ ರತ್ನ ಪ್ರಶಸ್ತಿ ನೀಡಲಾಯಿತು.

ಜಾಹೀರಾತು

ಬೆಳಿಗ್ಗೆ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಪ್ರೇಮನಾಥ ನೇರಂಬೋಳು, ಕೃತಿಕ್ ಕುಮಾರ್ ವೈ.ಎಸ್., ವೈಷ್ಣವಿ ವೈ.ಕೆ. ಇವರಿಂದ ಗಾನ ಸಂಭ್ರಮ ಮತ್ತು ಸಂಜೆ ಕಟೀಲು ಮೇಳದ ಕಲಾವಿದ ಅಶ್ವಥ್ ಕುಲಾಲ್ ಮಂಜನಾಡಿ ಇವರ ನೇತೃತ್ವದಲ್ಲಿ ಕುಲಾಲ ಸಮಾಜ ಬಾಂಧವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯಿತು.

ಡ್ಯಾನ್ಸ್ ಕೋರಿಯೋಗ್ರಾಫರ್ ಮಹೇಶ್ ಕುಲಾಲ್ ಕಡೇಶಿವಾಲಯ, ತಾರನಾಥ ಮೊಡಂಕಾಪು, ಹರಿಣಾಕ್ಷಿ ಮೊಡಂಕಾಪು, ರಾಜೇಶ್ ಕುಮಾರ್ ರಾಯಿ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಯಾದವ ಅಗ್ರಬೈಲು ಸ್ವಾಗತಿಸಿದರು. ಮಹಿಳಾ ಘಟಕದ ಸದಸ್ಯರು ಪ್ರಾರ್ಥಿಸಿದರು. ಕಾರ್ಯಕ್ರಮಕ್ಕೆ ಮಚ್ಚೇಂದ್ರ ಸಾಲಿಯಾನ್, ದೇವದಾಸ ಅಗ್ರಬೈಲು, ರಾಘವೇಂದ್ರ ಕಾಮಾಜೆ, ಗಣೇಶ್ ಕುಲಾಲ್ ಬೆದ್ರಗುಡ್ಡೆ, ಮೀನಾಕ್ಷಿಪದ್ಮನಾಭ, ಸತೀಶ್ ಸಂಪಾಜೆ, ಯೋಗೀಶ್ ಮಿತ್ತಬೈಲು, ರಮೇಶ್ ಸಾಲಿಯಾನ್ ಕೈಕುಂಜೆ, ಜಯಂತ ಬಂಗೇರ ವಗ್ಗ, ಪ್ರೇಮ ಪೊಸಳ್ಳಿ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

VNR GOLD

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ವಾರ್ಷಿಕ ಮಹಾಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*