ಕಲ್ಲಡ್ಕ

ಸೂರಿಕುಮೇರುವಿನಲ್ಲಿ  ಬೈಕ್, ಸ್ಕೂಟರ್ ಡಿಕ್ಕಿ, ಬಾಲಕಿ ಸಾವು

ಬಂಟ್ವಾಳ: ಕಲ್ಲಡ್ಕದಿಂದ ಮಾಣಿಗೆ ತೆರಳುತ್ತಿದ್ದ ಬೈಕ್  ಗೆ ಸ್ಕೂಟರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ  ಹತ್ತು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.  ಬಾಳ್ತಿಲ ಗ್ರಾಮದ ಹೇಮಂತ್ ಕುಮಾರ್ ಎಂಬವರ ಪುತ್ರಿ ನೈರುತಿ ಎಂ. ಸುವರ್ಣ (10) ಮೃತಪಟ್ಟ ಬಾಲಕಿ.

ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿಯ ವೇಳೆ ಮೃತಪಟ್ಟಿದ್ದಾಳೆ. ನೆಟ್ಲ ಸದಾಶಿವ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಪತ್ನಿ ಮತ್ತು ಮಕ್ಕಳಾದ ನೈರುತಿ ಮತ್ತು ಆಕೆಯ ತಂಗಿಯೊಂದಿಗೆ ಮನೆಗೆ ತೆರಳುತ್ತಿದ್ದ ವೇಳೆ ಹೇಮಂತ್ ಅವರಿದ್ದ ಬೈಕ್ ಗೆ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಸೂರಿಕುಮೇರು ಸಮೀಪ ಈ ಘಟನೆ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ, ಕಾಂಕ್ರೀಟ್ ರಸ್ತೆಗೆ ನೈರಿತಿ ಬಿದ್ದಿದ್ದಾಳೆ. ಈ ಸಂದರ್ಭ ತಲೆಗೆ ಗಂಭೀರ ಪೆಟ್ಟಾಗಿದೆ.  ಕೂಡಲೇ ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಈಕೆ ಸ್ಥಳೀಯ ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದು, ಭಜನಾ ತರಬೇತಿಯನ್ನೂ ಪಡೆಯುತ್ತಿದ್ದಳು. ಉತ್ತಮ ಭಜನಾಪಟುವೂ ಆಗಿದ್ದಳು.ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ. ಆದರ್ಶ್ ಸಹಿತ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts