ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಬಂಟ್ವಾಳ ಶ್ರೀ ಸತ್ಯಸಾಯಿ ಸಮಿತಿಯ ವತಿಯಿಂದ ನೋಟ್ ಬುಕ್ ವಿತರಣೆ ನಡೆಯಿತು. ಇದೇ ವೇಳೆ ಸರಕಾರದಿಂದ ಒದಗಿಸಲಾದ ಸಮವಸ್ತ್ರ ವಿತರಣೆಯೂ ನಡೆಯಿತು.

ಬಂಟ್ವಾಳದ ಸತ್ಯಸಾಯಿ ಸಮಿತಿಯ ಶಿಕ್ಷಣ ಸಂಯೋಜಕರಾಗಿರುವ ಭಾರತಿ ಕುಂದರ್ ಮಕ್ಕಳಿಗೆ ನೋಟ್ ಬುಕ್ ವಿತರಿಸಿ ಮಾತನಾಡಿ, ಒಳ್ಳೆಯ ಚಿಂತನೆ, ಉತ್ತಮ ಸಮಾಜ ನಿರ್ಮಾಣಕ್ಕಾಗಿ ಎಳವೆಯಲ್ಲಿಯೇ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯವನ್ನು ಶ್ರೀ ಸತ್ಯಸಾಯಿ ಸಮಿತಿ ಮಾಡುತ್ತಿದ್ದು, ಅದರ ಅಂಗವಾಗಿ ಬಿ.ಮೂಡ ಸರಕಾರಿ ಪ್ರಾಥಮಿಕ ಶಾಲೆಯನ್ನು ಆಯ್ದುಕೊಂಡಿದೆ. ಪರಿಸರ ಸಂರಕ್ಷಣೆ ಸಹಿತ ಪ್ರತಿಯೊಂದು ವಿಚಾರದಲ್ಲೂ ಮಕ್ಕಳಿಗೆ ಸದ್ವಿಚಾರವನ್ನು ಬಿತ್ತರಿಸುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ ಎಂದರು.

ಮಂಗಳೂರಿನ ಗ್ಲೋಬಲ್ ಇಕೋ ಫೌಂಡೇಶನ್ ನಿರ್ದೇಶಕ ಹಾಗೂ ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಯುವ ಮಹಿಳಾ ವಿಭಾಗ ಸಂಯೋಜಕರಾದ ದೀಪಾ ಪ್ರವೀಣ್, ಹಿರಿಯ ವಿದ್ಯಾರ್ಥಿಗಳಾದ ಪತ್ರಕರ್ತರಾದ ಯಾದವ ಅಗ್ರಬೈಲು, ಸಂದೀಪ್ ಸಾಲ್ಯಾನ್, ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಹರೀಶ್ ಮಾಂಬಾಡಿ, ಮುಖ್ಯ ಶಿಕ್ಷಕಿ ಲಕ್ಷ್ಮೀ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶಶಿಧರ್ ಮತ್ತು ಸದಸ್ಯರಾದ ಕವಿತಾ, ಅನಿತಾ, ಜಯಂತಿ, ನಿಶ್ಮಿತಾ, ಸುನೀತಾ ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ವಿನೋದಾ ಅಧ್ಯಕ್ಷತೆ ವಹಿಸಿದ್ದರು.  ಎಸ್.ಡಿ.ಎಂ.ಸಿ. ಸದಸ್ಯ ಶಿವಮೂರ್ತಿ ಆರ್. ವಂದಿಸಿದರು. ಶಿಕ್ಷಕಿ ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ಐರಿನ್, ವಿಮಲಾ, ನಿಶ್ಮಿತಾ, ಪೂರ್ಣಿಮಾ, ಲಾವಣ್ಯ, ದಿವ್ಯಾ ಸಹಕರಿಸಿದರು.  

ಜಾಹೀರಾತು

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*