ಬಂಟ್ವಾಳ

ಮಕ್ಕಳ ಹೆಸರಲ್ಲಿ ಸಸಿ ನೆಟ್ಟು ಪೋಷಿಸಿ: ಪಿಯೂಸ್ ಎಲ್. ರೋಡ್ರಿಗಸ್ – ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಇದರ ಅಂಗವಾಗಿ ವಿದ್ಯಾರ್ಥಿಗಳಿಗೆ ಪರಿಸರ ಕುರಿತ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದ್ದು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಹಾಗೂ ಬುಡಾ ಮಾಜಿ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಅವರು ಬಹುಮಾನ ವಿತರಿಸಿ ಮಾತನಾಡಿ, ವರ್ಷದ 365 ದಿನಗಳೂ ಪರಿಸರ ದಿನಗಳೇ ಆಗಿದೆ. ಮಕ್ಕಳ ಹೆಸರಲ್ಲಿ ಸಸಿ ನೆಟ್ಟು ಅವುಗಳನ್ನು ಪೋಷಿಸಿ ಎಂದು ಹೆತ್ತವರಿಗೆ ಕಿವಿಮಾತು ಹೇಳಿದರು. ಪಟಾಕಿ ಸಹಿತ ಮಾಲಿನ್ಯ ಉಂಟುಮಾಡುವುದನ್ನು ನಾವು ತ್ಯಜಿಸಬೇಕು, ಪ್ಲಾಸ್ಟಿಕ್ ಬಳಕೆಯ ಬದಲು ಪರ್ಯಾಯ ಮಾರ್ಗ ಅನುಸರಿಸಬೇಕು ಎಂದ ಅವರು, ನಮ್ಮ ದೇಹದ ಆರೋಗ್ಯ ಹೇಗೆ ಕಾಪಾಡುತ್ತೇವೋ ಹಾಗೆಯೇ ಭೂಮಿಯ ಆರೋಗ್ಯವನ್ನೂ ರಕ್ಷಿಸಬೇಕಾಗಿರುವುದು ಇಂದಿನ ಅನಿವಾರ್ಯ. ಸಾಧ್ಯವಾದಷ್ಟು ಸಾವಯವ ಉತ್ಪನ್ನ ಬಳಕೆ ಮಾಡಬೇಕು, ತ್ಯಾಜ್ಯ ಸಮರ್ಪಕ ವಿಲೇವಾರಿ ಕುರಿತು ಗಮನಹರಿಸಬೇಕು, ಮನೆಯ ಶೇ.30ರಷ್ಟಾದರೂ ಹಸಿರು ಇರಬೇಕು ಎಂದರು.

ಮಂಗಳೂರಿನ ಗ್ಲೋಬಲ್ ಇಕೋ ಫೌಂಡೇಶನ್ ನಿರ್ದೇಶಕ ಹಾಗೂ ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಮಕ್ಕಳಿಗೆ ಪರಿಸರಸ್ನೇಹಿ ಬಟ್ಟೆ ಕೈಚೀಲ ವಿತರಿಸಿ ಮಾತನಾಡಿ, ಮಕ್ಕಳಲ್ಲಿ ಪರಿಸರಪ್ರಜ್ಞೆಯನ್ನು ಬೆಳೆಸಲು ಕೈಚೀಲ ವಿತರಿಸಲಾಗುತ್ತಿದೆ. ಅಂಗಡಿಗೆ ಹೋಗಿ ತರಕಾರಿ ಮತ್ತಿತರ ಸಾಮಗ್ರಿಗಳನ್ನು ತರಲು ಹಾಗೂ ಪ್ಲಾಸ್ಟಿಕ್ ಮುಕ್ತ ವ್ಯವಸ್ಥೆಯನ್ನು ನಿರ್ಮಿಸಬೇಕಾಗಿದೆ ಎಂದರು.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಮಾತನಾಡಿ, ಇತ್ತೀಚೆಗೆ ದಕ್ಷಿಣ ಕನ್ನಡ ದಲ್ಲೂ ಅಧಿಕ ತಾಪಮಾನದಿಂದ ಮನೆಯಿಂದ ಹೊರಗೆ ಬರಲು ಆಗದಂಥ ಪರಿಸ್ಥಿತಿ ನಿರ್ಮಾಣವಾಗಲು ನಾವು ಕಾರಣರಾಗಿದ್ದೇವೆ. ಪರಿಸರ ಸಂರಕ್ಷಣೆಯ ಕುರಿತು ಗಂಭೀರವಾಗಿ ಯೋಚಿಸಬೇಕು ಎಂದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ವಿನೋದಾ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳದ ಸತ್ಯಸಾಯಿ ಸಮಿತಿಯ ಶಿಕ್ಷಣ ಸಂಯೋಜಕರಾಗಿರುವ ಭಾರತಿ ಕುಂದರ್, ಯುವ ಮಹಿಳಾ ವಿಭಾಗ ಸಂಯೋಜಕರಾದ ದೀಪಾ ಪ್ರವೀಣ್, ಮುಖ್ಯ ಶಿಕ್ಷಕಿ ಲಕ್ಷ್ಮೀ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶಶಿಧರ್ ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಹರೀಶ ಮಾಂಬಾಡಿ ಸ್ವಾಗತಿಸಿದರು. ಎಸ್.ಡಿ.ಎಂ.ಸಿ. ಸದಸ್ಯ ಶಿವಮೂರ್ತಿ ಆರ್. ವಂದಿಸಿದರು. ಶಿಕ್ಷಕಿ ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ಐರಿನ್, ವಿಮಲಾ, ನಿಶ್ಮಿತಾ, ಪೂರ್ಣಿಮಾ, ಲಾವಣ್ಯ, ದಿವ್ಯಾ ಸಹಕರಿಸಿದರು.  

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.