ಬಂಟ್ವಾಳ: ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಆನ್ಲೈನ್ ಪ್ರವೇಶ ಪ್ರಕ್ರಿಯೆ ಮುಗಿದ ಬಳಿಕ ಉಳಿಕೆಯಾದ ಸೀಟುಗಳಿಗೆ ಪ್ರಿನ್ಸಿಪಾಲ್ ಹಂತದಲ್ಲಿ ಪ್ರವೇಶ ಪ್ರಕ್ರಿಯೆ ನಡೆಸುವ ಸಲುವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಎಸ್.ಎಸ್.ಎಲ್.ಸಿ, ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಜೂನ್ 10ರೊಳಗೆ ಅವಧಿಯನ್ನು ನಿಗದಿಪಡಿಸಲಾಗಿದೆ. ಜೂನ್ 11ರಂದು ಸಂಸ್ಥೆಯಲ್ಲಿ ಮೆರಿಟ್ ಮತ್ತು ರೋಸ್ಟರ್‌ಗನುಗುಣವಾಗಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು, ಶುಲ್ಕ ಪಾವತಿಸಿ ಪ್ರವೇಶ ಪಡೆಯಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಕಚೇರಿಯನ್ನು ಬೆಳಿಗ್ಗೆ 10ರಿಂದ ಸಂಜೆ 5.30ರ ವರೆಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಅಭ್ಯರ್ಥಿಗಳು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್ dtek.karnataka.gov.in & dtetech.karnataka.gov.in/kea/ ಮೂಲಕ ಪ್ರಚುರಪಡಿಸುವ ಮಾಹಿತಿ ಪುಸ್ತಕವನ್ನು ಡೌನ್ ಲೋಡ್ ಮಾಡಿಕೊಳ್ಳಲು ಹಾಗೂ ಮಾಹಿತಿ ಪುಸ್ತಕದಲ್ಲಿರುವ ಸೂಚನೆಗಳನ್ವಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 10ರ ಸಂಜೆ 5.30ರವರೆಗೆ ಅವಧಿಯನ್ನು ನಿಗಧಿಪಡಿಸಲಾಗಿದೆ. ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿ ಮೊಬೈಲ್ ಸಂಖ್ಯೆ : 9448835521 ಮತ್ತು 8762328660ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Be the first to comment on "Bantwal GPT: ಆಫ್-ಲೈನ್ ಮೂಲಕ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾಧಿಸೂಚನೆ"