ಬಂಟ್ವಾಳ

Bantwal GPT: ಆಫ್-ಲೈನ್ ಮೂಲಕ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾಧಿಸೂಚನೆ

ಬಂಟ್ವಾಳ: ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಆನ್ಲೈನ್ ಪ್ರವೇಶ ಪ್ರಕ್ರಿಯೆ ಮುಗಿದ ಬಳಿಕ ಉಳಿಕೆಯಾದ ಸೀಟುಗಳಿಗೆ ಪ್ರಿನ್ಸಿಪಾಲ್ ಹಂತದಲ್ಲಿ ಪ್ರವೇಶ ಪ್ರಕ್ರಿಯೆ ನಡೆಸುವ ಸಲುವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಎಸ್.ಎಸ್.ಎಲ್.ಸಿ, ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಜೂನ್ 10ರೊಳಗೆ ಅವಧಿಯನ್ನು ನಿಗದಿಪಡಿಸಲಾಗಿದೆ. ಜೂನ್ 11ರಂದು ಸಂಸ್ಥೆಯಲ್ಲಿ ಮೆರಿಟ್ ಮತ್ತು ರೋಸ್ಟರ್‌ಗನುಗುಣವಾಗಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು, ಶುಲ್ಕ ಪಾವತಿಸಿ ಪ್ರವೇಶ ಪಡೆಯಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಕಚೇರಿಯನ್ನು ಬೆಳಿಗ್ಗೆ 10ರಿಂದ ಸಂಜೆ 5.30ರ ವರೆಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಅಭ್ಯರ್ಥಿಗಳು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್ dtek.karnataka.gov.in & dtetech.karnataka.gov.in/kea/ ಮೂಲಕ ಪ್ರಚುರಪಡಿಸುವ ಮಾಹಿತಿ ಪುಸ್ತಕವನ್ನು ಡೌನ್ ಲೋಡ್ ಮಾಡಿಕೊಳ್ಳಲು ಹಾಗೂ ಮಾಹಿತಿ ಪುಸ್ತಕದಲ್ಲಿರುವ ಸೂಚನೆಗಳನ್ವಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 10ರ ಸಂಜೆ 5.30ರವರೆಗೆ ಅವಧಿಯನ್ನು ನಿಗಧಿಪಡಿಸಲಾಗಿದೆ. ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿ ಮೊಬೈಲ್ ಸಂಖ್ಯೆ : 9448835521 ಮತ್ತು 8762328660ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.