ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಕುರಿತು ಕೀಳಾಗಿ ಮಾತನಾಡಿರುವ ಜತೆಗೆ ಅವಹೇಳನಕಾರಿ ಪದ ಬಳಕೆ ಮಾಡಿರುವ ಮಹಿಳೆ ವಿರುದ್ಧ ಕಾನೂನು ಕ್ರಮ ಕ್ರಮಕ್ಕೆ ಆಗ್ರಹಿಸಿ ಬಂಟ್ವಾಳ ತಹಸೀಲ್ದಾರ್ ಮತ್ತು ಡಿವೈಎಸ್ಪಿ ಕಚೇರಿಗೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ವಿವಿಧ ಬಿಲ್ಲವ ಸಂಘಟನೆಗಳು ಒಟ್ಟಾಗಿ ಸೋಮವಾರ ಮನವಿ ಸಲ್ಲಿಸಲಾಯಿತು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚಿನಡ್ಕ ನೇತೃತ್ವದಲ್ಲಿ ತಾಲೂಕಿನ ವಿವಿಧ ಬಿಲ್ಲವ ಸಂಘಗಳ ಉಪಸ್ಥಿತಿಯಲ್ಲಿ ತಾಲೂಕು ಕಚೇರಿಯಲ್ಲಿ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಖಂಡನಾ ನಿರ್ಣಯದ ಹಕ್ಕೊತ್ತಾಯ ಮಂಡಿಸಿದರು. ಬಳಿಕ ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಅವರಿಗೆ ಮನವಿ ನೀಡಲಾಯಿತು. ಬಳಿಕ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧಿಕಾರಿ ಯಶ್ ಕುಮಾರ್ ಶರ್ಮಾ ಅವರಿಗೂ ಮನವಿ ನೀಡಲಾಯಿತು.

ಈ ಸಂದರ್ಭ ಬೂಡದ ಅದ್ಯಕ್ಷ ಬೇಬಿ ಕುಂದರ್, ಸಂಘದ ಮಾಜಿ ಅಧ್ಯಕ್ಷರಾದ ರಾಮಪ್ಪ ಪೂಜಾರಿ, ಸಂಜೀವ ಪೂಜಾರಿ ಗುರುಕೃಪಾ, ಉಪಾಧ್ಯಕ್ಷ ಜಯಪ್ರಕಾಶ್ ಜೆ ಎಸ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್, ಜತೆ ಕಾರ್ಯದರ್ಶಿ ಆನಂದ ಸಾಲ್ಯಾನ್, ಕೋಶಾಧಿಕಾರಿ ಸುನೀಲ್ ಕುಂದರ್, ಲೆಕ್ಕಪರಿಶೋಧಕ ಪ್ರಶಾಂತ್ ಕೋಟ್ಯಾನ್. ಯುವವಾಹಿನಿ ಬಂಟ್ವಾಳ ಘಟಕದ ನಿಯೋಜಿತ ಅಧ್ಯಕ್ಷ ಕಿರಣ್ ರಾಜ್ ಪೂಂಜೆರೆಕೋಡಿ, ತಾಲೂಕು ಮಹಿಳಾ ಸಮಿತಿ ಅಧ್ಯಕ್ಷೆ ರಾಗಿಣಿ ಮಾಧವ, ಉದ್ಯಮಿ ಪ್ರಕಾಶ್ ಅಂಚನ್ , ಕಾರಿಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್, ಸಿದ್ಧಕಟ್ಟೆ ಬಿಲ್ಲವ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ ಹಾಗೂ ತಾಲೂಕಿನ ವಿವಿಧ ಬಿಲ್ಲವ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ನಿರ್ವಹಿಸಿದರು.


Be the first to comment on "ಬಿಲ್ಲವ ಸಮಾಜ ಕುರಿತು ಅವಹೇಳನಕಾರಿ ಹೇಳಿಕೆ ವಿರುದ್ಧ ಕ್ರಮಕ್ಕೆ ಒತ್ತಾಯ, ಮನವಿ ಸಲ್ಲಿಕೆ"