ಮಳೆಗಾಲ ಮತ್ತು ಪರಿಸರ ವಿಷಯದ ರೀಲ್ಸ್ ಸ್ಪರ್ಧೆ

ಸುಳ್ಯ: ನೇಸರ ಯುವಕ ಮಂಡಲ ಹಾಗೂ ನೇಸರ ಯುವತಿ ಮಂಡಲ ಮುಕ್ಕೂರು ಇವರ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ “ಮಳೆಗಾಲ ಮತ್ತು ಪರಿಸರ” ವಿಷಯದ ರೀಲ್ಸ್ ಸ್ಪರ್ಧೆ–2026 ಆಯೋಜಿಸಲಾಗಿದೆ.

ಮಳೆಗಾಲದ ಸೌಂದರ್ಯ, ಪರಿಸರ ಸಂರಕ್ಷಣೆ, ನೀರಿನ ಮಹತ್ವ, ವೃಕ್ಷಾರೋಪಣ ಹಾಗೂ ಸ್ವಚ್ಛತೆ ಮತ್ತು ಹಸಿರು ಜೀವನಶೈಲಿ ವಿಷಯಗಳ ಕುರಿತು 30 ರಿಂದ 60 ಸೆಕೆಂಡುಗಳ ಅವಧಿಯ ಕನ್ನಡ ಧ್ವನಿಯ ರೀಲ್ಸ್‌ಗಳನ್ನು ಸ್ಪರ್ಧಿಗಳು ಸಿದ್ಧಪಡಿಸಿ ಸಲ್ಲಿಸಬಹುದಾಗಿದೆ. ರೀಲ್ಸ್ ಅನ್ನು ಸ್ಪರ್ಧಿಯೇ ಚಿತ್ರೀಕರಿಸಿ ತಯಾರಿಸಿರಬೇಕು ಹಾಗೂ ಒಬ್ಬ ಸ್ಪರ್ಧಿ ಒಂದು ರೀಲ್ಸ್ ಮಾತ್ರ ಸಲ್ಲಿಸಲು ಅವಕಾಶವಿದೆ.

ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು. ಸುಳ್ಯ, ಪುತ್ತೂರು, ಕಡಬ, ಬಂಟ್ವಾಳ ಹಾಗೂ ಬೆಳ್ತಂಗಡಿ ತಾಲೂಕುಗಳ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.

ಜಾಹೀರಾತು

ರೀಲ್ಸ್‌ಗಳನ್ನು ಜು. 10ರೊಳಗೆ ವಾಟ್ಸಾಪ್ ಸಂಖ್ಯೆ 9740189529ಕ್ಕೆ ಕಳುಹಿಸಬೇಕು ಎಂದು ಆಯೋಜಕರು ತಿಳಿಸಿದ್ದಾರೆ. ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿ

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಳೆಗಾಲ ಮತ್ತು ಪರಿಸರ ವಿಷಯದ ರೀಲ್ಸ್ ಸ್ಪರ್ಧೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*