ಬಂಟ್ವಾಳ: ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ ಆರಂಭದಲ್ಲಿ ಕೃತಕ ನೆರೆ ಕಂಡುಬಂದಿದೆ. ಇದರಿಂದ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವುದಲ್ಲದೆ, ಪಾದಚಾರಿಗಳಿಗೂ ಸಮಸ್ಯೆ ತಲೆದೋರಿದೆ.
ಇಲ್ಲಿ ಅಂಗಡಿ, ಮುಂಗಟ್ಟುಗಳಿಗೆ ವಹಿವಾಟುಗಳಿಗೆ ಆಗಮಿಸುವವರು ಪರದಾಡುವ ಪರಿಸ್ಥಿತಿ ಇದೆ. ಈ ಜಾಗದಲ್ಲಿ ರಸ್ತೆ ಅಭಿವೃದ್ಧಿ ಹಿನ್ನೆಲೆ ಹೆದ್ದಾರಿ ನಿರ್ಮಾಣದ ಗುತ್ತಿಗೆ ಕಂಪನಿಯವರು ರಸ್ತೆ ಅಗೆದು ಕಾಮಗಾರಿ ನಡೆಸಿ ಕೆಲ ದಿನಗಳಾಗಿದ್ದು, ಇನ್ನೂ ಪೂರ್ತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಮಳೆ ಬಂದಾಗ ಈ ರಸ್ತೆ ಹೊಳೆಯಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದು, ಕೂಡಲೇ ರಸ್ತೆಯನ್ನು ಸುಸ್ಥಿತಿಗೆ ತರುವಂತೆ ಆಗ್ರಹಿಸಿದ್ದಾರೆ.